25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ : ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿಯನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸಲಾಯಿತು.

ಬೆಳ್ತಂಗಡಿ ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದಲ್ಲದೆ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಮೂಲಕ ಅತ್ಯಂತ ವಿಶಿಷ್ಟವಾಗಿ ಮಹಾತ್ಮ ಗಾಂಧಿ ಜಯಂತಿ ಆಚರಿಸುವ ಮೂಲಕ ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ , ನ್ಯಾಷನಲ್ ಇನ್ಶುರೆನ್ಸ್ ಹಿರಿಯ ಅಭಿವೃದ್ಧಿ ಅಧಿಕಾರಿ ಜಾನ್ ಅರ್ವಿನ್ ಡಿಸೋಜ , ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್.ಎಂ , ಸುಳ್ಯ ಶಾಖೆಯ ನಿವೃತ್ತ ಮೆನೇಜರ್ ಪ್ರಮೋದ್ ಆರ್ ನಾಯಕ್ , ಭಾರತೀಯ ರೆಡ್ ಕ್ರಾಸ್ ಸೊಸೈಟಿ ಪ್ರಧಾನ ಕಾರ್ಯದರ್ಶಿ ಯಶವಂತ ಪಟವರ್ದನ್ , ಹಿರಿಯ ನ್ಯಾಯವಾದಿ , ನಿರ್ದೇಶಕರಾದ ಶಿವಕುಮಾರ್ ಎಸ್ , ಎಂ , ನಿರ್ದೇಶಕರಾದ ನ್ಯಾಯವಾದಿ ಸುಕನ್ಯಾ ಹೆಚ್ , ಉಪನ್ಯಾಸಕ ಸುಜೀತ್ ಉಜಿರೆ ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ

Suddi Udaya

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya
error: Content is protected !!