May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಅ.2 ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡಿತು. ಶಾಲಾ ಸಹ ಶಿಕ್ಷಕಿಯಾದ ಕುಮಾರಿ ಜೀವಿತರವರು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಮಹತ್ವವನ್ನು ವಿವರಿಸಿದ್ದರು. ನಂತರ ಶಾಲಾ ಸಂಚಾಲಕರಾದ ವಂ|ಸ್ವಾ|ಸ್ಟ್ಯಾನಿ ಗೋವಿಯಸ್ ರವರು, ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು, ಎಲ್ಲಾ ಶಿಕ್ಷಕ-ಶಿಕ್ಷಕೇತರ ವೃಂದದದವರು ಹಾಗೂ ವಿದ್ಯಾರ್ಥಿಗಳು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು.

ಶಾಲಾ ಸಂಚಾಲಕರಾದ ವಂ|ಸ್ವಾ|ಸ್ಟ್ಯಾನಿ ಗೋವಿಯಸ್ ರವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ನಾವು ಸ್ವಚ್ಛತೆಗೆ ಪ್ರಾಮುಖ್ಯತೆಯನ್ನು ಕೊಡಬೇಕು, ನಮ್ಮ ಸುತ್ತಮುತ್ತಲಿನ ಪರಿಸರವನ್ನು ನಾವು ಸ್ವಚ್ಛವಾಗಿ ಇಡಬೇಕು ಎಂದು ಹೇಳಿ, ಮಕ್ಕಳಿಗೆ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯ ಶುಭಾಶಯಗಳು ಕೋರಿದರು. ನಂತರ ಎಲ್ಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮವನ್ನು ಸಹ ಶಿಕ್ಷಕಿಯಾದ ಶ್ರೀಮತಿ ಹರಿಣಾಕ್ಷಿರವರು ನಿರೂಪಿಸಿ, ಕುಮಾರಿ ಪೂಜಶ್ರೀರವರು ಸ್ವಾಗತಿಸಿ, ಶ್ರೀಮತಿ ಆಶಾಲತಾ ರವರು ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!