April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜಿನಲ್ಲಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಭಾರತದ ದ್ವಿತೀಯ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಅಂಗವಾಗಿ, ಎಕ್ಸೆಲ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮವನ್ನು ಅಯೋಜಿಸಲಾಯಿತು. ದೀಪವನ್ನು ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಶುಭಾರಂಭ ಮಾಡಲಾಯಿತು.

ಈ ಸಂದರ್ಭದಲ್ಲಿ, ಎಕ್ಸೆಲ್ ಪಿಯು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ , ಗಾಂಧೀಜಿಯವರ ಅಹಿಂಸಾ ತತ್ತ್ವ, ಶಾಂತಿ, ಸ್ವಚ್ಛತೆ, ಹಾಗೂ ನೈತಿಕತೆ ಕುರಿತಾದ ಉದ್ದೇಶಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಜೊತೆಗೆ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ವಾತಂತ್ರ್ಯ ಹೋರಾಟದ ಹಾದಿ ಹಾಗೂ ಆದರ್ಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ನಂತರ, ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗುರುವಾಯನಕೆರೆಯಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು. ರಸ್ತೆಯ ಎರಡೂ ಬದಿಗಳನ್ನು ಸ್ವಚ್ಛಗೊಳಿಸುತ್ತಾ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿದರು. ಗುರುವಾಯನಕೆರೆಯ ನಾಲ್ಕು ದಿಕ್ಕುಗಳ ಎರಡು ಬದಿಯ ಕಿಲೋ ಮೀಟರ್ ಗಟ್ಟಲೆ ಶುಚಿತ್ವ ಮಾಡಿದರು. ಎಕ್ಸೆಲ್ ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು, ಸ್ವಚ್ಛತೆಗೆ ಸಂಬಂಧಿಸಿದಂತೆ ಕರೆ ನೀಡಿದರು. “ನಾವು ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರೆ, ದೇಶವನ್ನು ಸ್ವಚ್ಛಗೊಳಿಸುವ ಪ್ರಕ್ರಿಯೆ ಆರಂಭವಾಗುತ್ತದೆ ಮತ್ತು ಇದು ದೇಶದ ಒಟ್ಟಾರೆ ಅಭಿವೃದ್ದಿಗೆ ಸಹಾಯಕವಾಗುತ್ತದೆ” ಎಂದು ಹೇಳಿದರು. ಅಲ್ಲದೆ, ಅವರು ವಿದ್ಯಾರ್ಥಿಗಳು, ಉಪನ್ಯಾಸಕರು, ಹಾಗೂ ಹಾಸ್ಟೆಲ್ ವಾರ್ಡನ್‌ಗಳಿಗೆ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಅರಮಲೆ ಬೆಟ್ಟ ಕ್ಯಾಂಪಸ್ ನ ಪ್ರಭಾರ ಪ್ರಾಚಾರ್ಯರಾದ ಡಾ. ಪ್ರಜ್ವಲ್, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ.ಕೆ, ವಿಭಾಗ ಮುಖ್ಯಸ್ಥರಾದ ಪ್ರಸನ್ನ, ಪ್ರಭಾಕರ್, ರವಿ, ಹಾಗೂ ಉಪನ್ಯಾಸಕರು, ಹಾಸ್ಟೆಲ್ ವಾರ್ಡನ್‌ಗಳು, ಮತ್ತು ಮೊದಲ ವರ್ಷದ ಪಿಯು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕ ಮುನೀರ್ ನಿರ್ವಹಿಸಿದರು, ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ.ಕೆ ಸ್ವಾಗತಿಸಿದರು, ಮತ್ತು ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್ ವಂದಿಸಿದರು.

Related posts

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಉಜಿರೆ ಶ್ರೀ ಧ.ಮಂ ಕಾಲೇಜು ವತಿಯಿಂದ ನಿವೃತ್ತ ಕರ್ನಲ್ ನಿತಿನ್ ಭಿಡೆ ಅವರಿಗೆ ಸನ್ಮಾನ

Suddi Udaya
error: Content is protected !!