25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಅ.02 ರಂದು ನಡೆದ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ವಿಭಾಗದ ಕ್ರೀಡಾಕೂಟದಲ್ಲಿ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ಗೆದ್ದು, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ: ಮಹಮ್ಮದ್ ಶಹಾದ್ದೀನ್ (7ನೇ ತರಗತಿ) 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಮಹಮ್ಮದ್ ಮುಝಮಿಲ್ (7ನೇ ತರಗತಿ) 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಅಕ್ಷಾ (7ನೇ ತರಗತಿ) ಗುಂಡೆಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಪ್ರೌಢಶಾಲಾ ವಿಭಾಗದಲ್ಲಿ: ಹೇಮಂತ್ (9ನೇ ತರಗತಿ) ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ, ಅಲೆನ್ (10ನೇ ತರಗತಿ) ಗುಂಡೆಸೆತದಲ್ಲಿ ದ್ವಿತೀಯ ಸ್ಥಾನ., ತೃಷ (8ನೇ ತರಗತಿ) 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಸಾನ್ವಿ (8ನೇ ತರಗತಿ) 600 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಮತ್ತು ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ, ಫಾತಿಮತ್ ಶಜ್ಮ (9ನೇ ತರಗತಿ) ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ, ಧನುಷ್ (10ನೇ ತರಗತಿ) ಜಾವಲಿನ್ ಥ್ರೋ ದ್ವಿತೀಯ ಸ್ಥಾನ, ಕೀರ್ತೇಶ್ (10ನೇ ತರಗತಿ) ಜಾವಲಿನ್ ಥ್ರೋ ದ್ವಿತೀಯ ಸ್ಥಾನ, ಅಲೋನ (10ನೇ ತರಗತಿ) ಗುಂಡೆಸೆತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ವಂದನೀಯ ಫಾ| ಸಬಾಸ್ಟಿಯನ್, ಶಾಲಾ ಮುಖ್ಯಶಿಕ್ಷಕಿ ವಂದನೀಯ ಸಿಸ್ಟರ್ ಶೆರಿನ್, ಮತ್ತು ಶಿಕ್ಷಕ ವೃಂದ ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕ ಪ್ರಜ್ವಲ್ ತರಬೇತಿ ನೀಡಿದ್ದಾರೆ.

Related posts

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya
error: Content is protected !!