24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ವೇಣೂರು: ಗಾಂಧಿ ಜಯಂತಿ ಪ್ರಯುಕ್ತ ಭ| ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ವೇಣೂರು ವಲಯ ಅರಣ್ಯ ಇಲಾಖೆ ವತಿಯಿಂದ ಶ್ರೀ ದಿಗಂಬರ ಜೈ ತೀರ್ಥ ಕ್ಷೇತ್ರ ಸಮಿತಿ ವೇಣೂರು ಇವರ ಸಹಭಾಗಿತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಯಾತ್ರಿ ನಿವಾಸದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವೇಣೂರು ವಲಯ ಅರಣ್ಯ ಅಧಿಕಾರಿ ಸುಬ್ರಮಣ್ಯ ಆಚಾರ್ ತಮ್ಮ ಮನೆ ಅಲ್ಲದೆ ತಾವಿರುವ ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.


ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷೇಕದಲ್ಲಿ ಅರಣ್ಯ ಇಲಾಖೆ ವತಿಯಿಂದ ಇವರು ನೀಡಿದ ಸಹಕಾರವನ್ನು ಸ್ಮರಿಸುತ್ತಾ ಇವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿ ವತಿಯಿಂದ ಕಾರ್ಯದರ್ಶೀಗಳಾದ ವಿ. ಪ್ರವೀಣ್ ಕುಮಾರ್ ಇಂದ್ರ ಸನ್ಮಾನಿಸಿದರು.


ವಲಯದ ಎಲ್ಲ ಉಪ ಅರಣ್ಯಾಧಿಕಾರಿಗಳಾದ ಸುನಿಲ್, ಹರಿಪ್ರಸಾದ್, ಇಬ್ರಾಹಿಂ, ಸುರೇಶ್ ಮತ್ತು ಅರಣ್ಯ ಪಾಲಕರು, ಅರಣ್ಯ ವೀಕ್ಷಕರು ಹಾಗೂ ಸಿಬ್ಬಂದಿಗಳು ಮತ್ತು ತೀರ್ಥಕ್ಷೇತ್ರ ಸಮಿತಿಯ ಸಿಬ್ಬಂದಿಗಳಾದ ವೈ. ಜಯರಾಜ್, ದೀಪಶ್ರೀ ಉಪಸ್ಥಿತರಿದ್ದರು.

ವಿ. ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿ, ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿಯ ಕಾಯ೯ದಶಿ೯ಗಳಾದ ಮಹಾವೀರ್ ಜೈನ್ ಮೂಡುಕೋಡಿ ಗುತ್ತು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya
error: Content is protected !!