September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಕನ್ಯಾಡಿ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

155ನೇ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಶಾಲೆಯ ಆವರಣ ಹಾಗೂ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ನಂದ ಕೆ ದೀಪ ಬೆಳಗಿಸಿ ಭಾವಚಿತ್ರಕ್ಕೆ ಗೌರವ ಪೂರಕವಾದ ಪುಷ್ಪ ನಮನವನ್ನು ಸಲ್ಲಿಸಿದರು. ಶಿಕ್ಷಕ ವೃಂದದವರು ಹಾಗೂ ಶಾಲಾ ನಾಯಕ ಪುಷ್ಪ ನಮನ ಸಲ್ಲಿಸಿದರು. ನಂತರ ಸರ್ವಧರ್ಮ ಪ್ರಾರ್ಥನೆಯನ್ನು , ಧರ್ಮ ಗ್ರಂಥಗಳ ಪಠಣವನ್ನು ಮಾಡಲಾಯಿತು. ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಕುರಿತಂತೆ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ತಾಯಿ ಹೆಸರಿನಲ್ಲಿ ಒಂದು ಗಿಡ ಯೋಜನೆಯಡಿ ನಮ್ಮ ಶಾಲೆಯ ಮಕ್ಕಳು ಪೋಷಕರೊಂದಿಗೆ ಶಾಲೆಗೆ ಆಗಮಿಸಿ ಕರಿಬೇವು, ಸೀತಾಫಲ, ನಿಂಬೆ, ನೇರಳೆ, ತೆಂಗು ಮೊದಲಾದ ಗಿಡಗಳನ್ನು ನೆಟ್ಟು ಅವುಗಳನ್ನು ಚೆನ್ನಾಗಿ ಬೆಳೆಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

Related posts

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya
error: Content is protected !!