27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಇಂದು(ಅ.04) ನಡೆದಿದೆ.

ಮೃತ ವ್ಯಕ್ತಿ ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಮಿಯಾ‌ರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಮರದ ಗೆಲ್ಲು ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಆಯ ತಪ್ಪಿ ಕೆಳಗೆ ಬಿದಿದ್ದಾರೆ. ಅಲ್ಲಿದ್ದವರು ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.

ಮೃತರು ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ತಂದೆ ತಾಯಿಯನ್ನು ಅಗಲಿದ್ದಾರೆ.

Related posts

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!