25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

ಕೊಕ್ಕಡ : ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ ಅ.3 ರಂದು ಕೊಕ್ಕಡದ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜು ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಉದ್ಘಾಟಿಸಿ ಎನ್ ಎಸ್ ಎಸ್ ನ ಸ್ವಯಂಸೇವಕ ವಿದ್ಯಾರ್ಥಿಗಳಾದ ನೀವುಗಳು ಮಾಡಿದಂತಹ ಕೆಲಸ ಕಾರ್ಯಗಳು ಸಮಾಜದ ಒಳಿತಿಗೆ ಸಹಾಯವಾಗಬೇಕು ಹಾಗೂ ಬದುಕಿನಲ್ಲಿ ಸಿಹಿಯಾಗಿ ಉಳಿಯಬೇಕು, ಸಹಜೀವನ ಸಹೋದರತೆ, ಸಮಾಜಸೇವೆ ಸಮುದಾಯದಲ್ಲಿ ಬೆಳೆಯಲು ಇಂಥ ಶಿಬಿರಗಳಲ್ಲಿ ಕಲಿಯಲು ಮಾತ್ರ ಸಾಧ್ಯ ಎಂದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಚಾರ್ಯ ವಿಶ್ವನಾಥ.ರೈ ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿ ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಂಡು ದೇಶದ ಭವಿಷ್ಯ ರೂಪಿಸುವಲ್ಲಿ ನಾವೆಲ್ಲ ಬದ್ಧರಾಗಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಸಂಚಾಲಕ ರೆ.ಫಾ.ನೋಮಿಸ್ ಕುರಿಯಾಕೋಸ್ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ಧರ್ಮಗುರು ರೆ.ಫಾ.ಶಾಜಿ ಮ್ಯಾತ್ಯು, ಕೊಕ್ಕಡ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ರೀನಾ, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ದಾಮೋದರ ಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉಮ್ಮರ್ ಬೈಲಂಗಡಿ, ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಏರಿಯಾಸ್.ಎಂ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಎನ್ ಎಸ್ ಎಸ್ ಸ್ವಯಂಸೇವಕ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಹ ಶಿಬಿರಾಧಿಕಾರಿ ಉಪನ್ಯಾಸಕ ಮಧು.ಎ.ಜೆ ಸ್ವಾಗತಿಸಿದರು. ಉಪನ್ಯಾಸಕಿ ಗೀತಾ.ಪಿ.ಬಿ ವಂದಿಸಿದರು. ಶಿಬಿರಾಧಿಕಾರಿ ಉಪನ್ಯಾಸಕ ವಿಶ್ವನಾಥ್ ಶೆಟ್ಟಿ.ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya
error: Content is protected !!