ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿ ಜೀವನದಲ್ಲಿ ಸೇವಾ ಮನೋಭಾವ, ಶಿಸ್ತು, ಸಮಯ ಪಾಲನೆ ಹಾಗೂ ಕೂಡಿ ಬಾಳುವ ಮನೋಭಾವ ಬೆಳೆಸಿಕೊಳ್ಳಲು ಎನ್‌ಎಸ್‌ಎಸ್‌ ಶಿಬಿರಗಳು ಸಹಾಯಕಾರಿಯಾಗಿವೆ ಎಂದು ಮುಂಡಾಜೆಯ ಶತಾಬ್ದಿ ವಿದ್ಯಾಲಯ ಸಮಿತಿ ಸಂಚಾಲಕ ನಾರಾಯಣ ಫಡ್ಕೆ ಹೇಳಿದರು.


ಚಿಬಿದ್ರೆ ಗ್ರಾಮದ ಪೆರಿಯಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಕಾಲೇಜಿನ ಪ್ರಾಂಶುಪಾಲೆ ಜಾಲಿ ಓ.ಎ. ಅವರು ಅಧ್ಯಕ್ಷತೆ ವಹಿಸಿದ್ದರು.
ತೋಟತ್ತಾಡಿ ಸೇಂಟ್ ಆಂಟನೀಸ್‌ ಚರ್ಚ್‌ದ ಧರ್ಮಗುರು ಫಾ.ಜೋಸ್ ಪೂವತ್ತಿಂಗಳ್ ಆಶೀರ್ವಚನ ನೀಡಿದರು.
ಚಾರ್ಮಾಡಿಯ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಹೊಸ್ಮಠ, ಪೆರಿಯಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮೇರಿ ವಿ ವಿ, ಕುಡುಮಡ್ಕ ಅನ್ನಪೂರ್ಣೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೇಸರ ರಾಘವ ಗೌಡ ಕುಡುಮಡ್ಕ, ಶಿಬಿರ ನಿರ್ವಹಣಾ ಸಮಿತಿ ಅಧ್ಯಕ್ಷ ಸೋಮನಾಥ ಗೌಡ ಭಾಗವಹಿಸಿದ್ದರು.


ಎನ್ಎಸ್ಎಸ್ ಶಿಭಿರಾಧಿಕಾರಿ ನಮಿತಾ ಕೆ.ಆರ್.ಸ್ವಾಗತಿಸಿ, ಸಂಖ್ಯಾಶಾಸ್ತ್ರ ಉಪನ್ಯಾಸಕಿ ವಿದ್ಯಾ ರಾವ್ ವಂದಿಸಿದರು. ಕನ್ನಡ ಉಪನ್ಯಾಸಕಿ ವಸಂತಿ ಕಾರ್ಯಕ್ರಮ ನಿರ್ವಹಿಸಿದರು.

Leave a Comment

error: Content is protected !!