23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕ ೧ ಮತ್ತು ೨ , ಯೂತ್ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಇದರ ಜಂಟಿ ಆಶ್ರಯದಲ್ಲಿ”ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಷಯದ ಮೇಲೆ ವಿಶೇಷ ಉಪನ್ಯಾಸವನ್ನು ಸೆ.28 ರಂದು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರಿನ ಹಿರಿಯ ವೈದ್ಯಾಧಿಕಾರಿ ಡಾ.ಎಂ. ಅಣ್ಣಯ್ಯ ಕುಲಾಲ್ ಉಳ್ತುರ್ ಅವರು ಜೀವನದಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಮತ್ತು ಆರೋಗ್ಯಕ್ಕೆ ಪೂರಕವಾದ ಪೋಷಕಾಂಶಯುಕ್ತ ಯುಕ್ತ ಆಹಾರ ಪದಾರ್ಥಗಳನ್ನು, ತರಕಾರಿ, ಹಣ್ಣು ತಿನ್ನಬೇಕು ಮತ್ತು ನಮ್ಮ ಆರೋಗ್ಯಕ್ಕೆ ಬೇಕಾದ ಆಹಾರ ಗಳನ್ನು ಹೇಗೆ ಉಪಯೋಗಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಮಾಧವರವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಐಕ್ಯೂ ಎಸಿ ಸಂಚಾಲಕರಾದ ಡಾ. ಅವಿತ ಮರಿಯ ಕ್ವಾಡ್ರಸ್, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಪ್ರೊ. ಚಿತ್ರಾ ಪಡಿಯಾರ್ ಮತ್ತು ಪ್ರೊ. ಸಂತೋಷ್ ಪ್ರಭು, ಯೂತ್ ರೆಡ್ ಕ್ರಾಸ್‌ನ ಡಾ. ವೈಶಾಲಿ ಯು ಮತ್ತು ಪ್ರೊ| ಶೇಖರ್ ಕೆ, ರೋವರ್ಸ್ ಮತ್ತು ರೇಂಜರ್ಸ್ ನ ಸಂಯೋಜಕ ಡಾ. ಪ್ರೀತಿ ಕೆ ರಾವ್ ಮತ್ತು ಪ್ರೊ|ಆಂಜನೇಯ ಎಂ ಎನ್ ಉಪಸ್ಥಿತರಿದ್ದರು.
ಕು| ಏಕಿತ ಸಂನನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಜಿತೇಶ್ ಸ್ವಾಗತಿಸಿದರು, ಕು|ದಿವ್ಯಾ ವಂದಿಸಿದರು ಕು| ಯೋಗಿತಾ ನಿರೂಪಿಸಿದರು.

Related posts

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ನಾವೂರು: ಅಬೂಬಕ್ಕರ್ ರವರ ಮನೆ ಬಳಿ ಧರೆ ಕುಸಿತ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ನಾರಾವಿ ಮಾಂಡೋವಿ ಮೋಟಾರ್‍ಸ್ ಶೋರೂಮ್ ನಲ್ಲಿ ಡಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!