24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

ಬೆಳಾಲು : ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬೆಳ್ತಂಗಡಿ ತಾಲೂಕು ಉಜಿರೆ ವಲಯ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.)ಬೆಳ್ತಂಗಡಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದ ಕ ಜಿಲ್ಲೆ, ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಇವರ ಮಾರ್ಗದರ್ಶನದೊಂದಿಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ, ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ-ಬೆಳಾಲು, ರೋಟರಿ ಕ್ಲಬ್ ಬೆಳ್ತಂಗಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ, ನವಜೀವನ ಸಮಿತಿ ಬೆಳ್ತಂಗಡಿ ತಾಲೂಕು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ಜರಗುವ ಬೆಳಾಲು ನವಜೀನವ ಸಮಿತಿ ಸದಸ್ಯರ 25ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ 1867ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಫ್ರೌಡ ಶಾಲೆ ,ಬೆಳಾಲು ನಲ್ಲಿ ಜರುಗಿತು.

ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯ ಇವರು ದೀಪ ಬೆಳಗಿಸುವ ಮೂಲಕ ಉಧ್ಘಾಟಿಸಿ ಸಮಾಜದಲ್ಲಿ ನಾವು ಅನೇಕ ರೀತಿಯ ದುಶ್ಚಟಗಳನ್ನು ಗಮನಿಸುತ್ತಿದ್ದು, ಈ ದುಶ್ಚಟ ಸಮಾಜವನ್ನು ಗಂಭೀರವಾಗಿ ಹಾನಿ ಮಾಡುತ್ತದೆ ಮದ್ಯಪಾನ ಅನ್ನುವುದು ಮದ್ಯಪಾನ ಮಾಡುವ ವ್ಯಕ್ತಿಗೆ ಪರಿಣಾಮ ಬೀರದೆ ಕುಟುಂಬ ಮತ್ತು ಸಮಾಜಕ್ಕೆ ದುಷ್ಪರಿಣಾಮ ಬೀರುತ್ತದೆ, ಸಮಾಜಕ್ಕೆ ಹೊರೆಯಾಗುವವರನ್ನು ಸಮಾಜಕ್ಕೆ ಆಸರೆಯಾಗಿ ಮಾಡುವ ಈ ಮದ್ಯವರ್ಜನ ಶಿಬಿರವು ಯಶಸ್ವಿಯಾಗಲಿ ಎಂದು ಹಾರೈಸಿದರು.

ಉಡುಪಿ ಕರಾವಳಿ ಪ್ರಾದೇಶಿಕ ಕಛೇರಿ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತನಾಡಿ ಜನಜಾಗೃತಿ ವೇದಿಕೆ ಆರಂಭ, ಉದ್ದೇಶ, ಮದ್ಯವರ್ಜನ ಶಿಬಿರ ಅನುಷ್ಠಾನ, ರೂಪುರೇಷೆ, ಶಿಬಿರದ ದೈನಂದಿನ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಜನಜಾಗೃತಿ ವೇದಿಕೆ. ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ, ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ತಿಮ್ಮಪ್ಪ ಗೌಡ, ನಿವೃತ್ತ ಪ್ರಾದೇಶಿಕ ನಿರ್ದೇಶಕರು ಸೀತಾರಾಮ ಶೆಟ್ಟಿ, ಜನಜಾಗೃತಿ ವೇದಿಕೆ ಉಜಿರೆ ವಲಯಾಧ್ಯಕ್ಷರು ಶ್ರೀಮತಿ ಪುಷ್ಪಾ ಆರ್ ಶೆಟ್ಟಿ, ಆಡಳಿತ ಮಂಡಳಿ ಪಜಿರಡ್ಕ ದೇವಸ್ಥಾನ ಮಾಜಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ, ಮುಖ್ಯ ಸೇವಾ ಸಹಕಾರಿ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ, ಅಮೃತ್ ಟೆಕ್ಸ್ ಟೈಲ್ಸ್ ಮಾಲಕರು ಪ್ರಶಾಂತ್ ಜೈನ್, ಬೆಳಾಲು 1867ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಶಿಬಿರಾಧಿಕಾರಿ ದೇವಿಪ್ರಸಾದ್ ಸುವರ್ಣ, ಆರೋಗ್ಯ ಸಹಾಯಕಿ ಪ್ರೆಸಿಲ್ಲಾ, ಬೆಳ್ತಂಗಡಿ ಜನಜಾಗೃತಿ ವೇದಿಕೆ ಆಡಳಿತ ಯೋಜನಾಧಿಕಾರಿ ಮಾಧವಗೌಡ ಗುರುವಾಯನಕೆರೆ ಕ್ಷೇತ್ರ ಯೋಜನಾಧಿಕಾರಿ ದಯಾನಂದ ಉಪಸ್ಥಿತರಿದ್ದರು.

ಬೆಳ್ತಂಗಡಿ ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ, ಪ್ರಗತಿ ಬಂಧು ಒಕ್ಕೂಟದ ವಲಯಾಧ್ಯಕ್ಷರಾದ ಉಮರ್, ಅಧ್ಯಕ್ಷ ರತ್ನಾಕರ, ಗಂಗಾಧರ, ಶ್ರೀಮತಿ ನೀಲಾವತಿ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಸೂರಪ್ಪ, ವಲಯದ ಎಲ್ಲಾ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿ ಸದಸ್ಯರು, ಜನಜಾಗೃತಿ ಗ್ರಾಮ ಸಮಿತಿ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯರು, ಪ್ರಗತಿ ಬಂದು ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

ಕ್ಷೇತ್ರ ಯೋಜನಾಧಿಕಾರಿಗಳಾದ ಸುರೇಂದ್ರ ಸ್ವಾಗತಿಸಿದರು, ವಲಯ ಮೇಲ್ವಿಚಾರಕಿ ಶ್ರೀಮತಿ ವನಿತಾ ವಂದಿಸಿದರು, ಕಾರ್ಯಕ್ರಮವನ್ನು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರಾವಸಂತ್ ನಿರೂಪಿಸಿದರು.

Related posts

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ