April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಶಾಲೆಯಲ್ಲಿ ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆ ಹಾಗೂ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ಕಬ್ಸ್, ಬುಲ್ ಬುಲ್, ಸೌಟ್ಸ್, ಗೈಡ್ಸ್, ರೋವರ್ಸ್‌ ಮತ್ತು ರೇಂಜರ್ಸ್ ವಿಭಾಗಗಳ ಎರಡು ದಿನದ ತರಬೇತಿ ಶಿಬಿರದ ಉದ್ಘಾಟನೆಯು ಜರುಗಿತು.


ಶಿಬಿರದ ಉದ್ಘಾಟನೆಯನ್ನು ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ ನೆರವೇರಿಸಿ ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಜಾಲಿ ಓ ಎ ವಹಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು. ನಿರಂಜನ್, ಸ್ಕೌಟ್ ಮಾಸ್ಟರ್ ಹಾಗೂ ಶ್ರೀಮತಿ ಸೇವಂತಿ ಬಿ, ಫ್ಲಾಕ್ ಲೀಡರ್ ಮುಖ್ಯ ತರಬೇತುದಾರರಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ನಿವೃತ್ತ ಮುಖ್ಯ ಶಿಕ್ಷಕರು, ಪ್ರಗತಿಪರ ಕೃಷಿಕರು ಮುಂತಾದ ಹಲವು ರಂಗಗಳಲ್ಲಿ ಗುರುತಿಸಿಕೊಂಡಿರುವ ಗಜಾನನ ವಝೆಯವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು.
ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚಂದ್ರಮತಿ, ಸರಸ್ವತಿ ಪ್ರಾಥಮಿಕ ಶಾಲೆಯ ಸಂಯೋಜಕಿ ಶ್ರೀಮತಿ ಶ್ರೀಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಹಿರಿಯ ರೋವರ್ಸ್ ಮತ್ತು ರೇಂಜರ್ಸ್ ಗಳು ತರಬೇತಿಯಲ್ಲಿ ಸಹಕರಿಸಿದರು.


ರೇಂಜರ್ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ರೇಂಜರ್ ಲೀಡರ್ ಶ್ರೀಮತಿ ವಸಂತಿ ನಿರೂಪಿಸಿ, ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್ ಕೆ ಸ್ವಾಗತಿಸಿ, ಕಬ್ ಮಾಸ್ಟರ್ ಶ್ರೀಮತಿ ಪ್ರೇಮ ಧನ್ಯವಾದಗೈದರು.

Related posts

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಮೇ 22: ಎಕ್ಸೆಲ್ ಅಕ್ಷರೋತ್ಸವ; ರಾಜ್ಯಮಟ್ಟದ ಕವಿಗೋಷ್ಠಿಗೆ ಆಹ್ವಾನ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!