ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆ ರಾಷ್ಟ್ರೀಯ ಸೇವಾ ಯೋಜನೆ ಇದರ ಸುವರ್ಣ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ “ಸುವರ್ಣ ಸಮ್ಮಿಲನ” ಇದು ಸುವರ್ಣ ಹೆಜ್ಜೆಗಳ ಅವಲೋಕನ ಕಾರ್ಯಕ್ರಮವು ಅ. 05 ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳದ ಹಷೇ೯ಂದ್ರ ಕುಮಾರ್ ನೆರವೇರಿಸಿದರು.
ಅಧ್ಯಕ್ಷತೆಯನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಪ್ರಾಂಶುಪಾಲರು ಡಾ. ಬಿ. ಎ. ಕುಮಾರ ಹೆಗ್ಡೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಪ್ರತಾಪ್ ಲಿಂಗಯ್ಯ, ಮಂಗಳೂರು ರಾಷ್ಟ್ರೀಯ ಸೇವಾ ಯೋಜನೆ, ಸಂಯೋಜಕರು ಡಾ. ಶೇಷಪ್ಪ ಕೆ., ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸೇವಾ ಪಥ – ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಸಮಾರಂಭದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಹಾಗೂ ಸಮಾಜ ಸೇವಕ ರವಿ ಕಟಪಾಡಿ ಇವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಹಾಗೂ ಹಿರಿಯ ಯೋಜನಾಧಿಕಾರಿಗಳಿಗೆ , ಸ್ವಯಂಸೇವಕ ಸಾಧಕರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಯುನಿಟ್ 1 ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. , ಯುನಿಟ್ 2 ಯೋಜನಾಧಿಕಾರಿ ಶ್ರೀಮತಿ ದೀಪಾ ಆರ್. ಪಿ., ಹಾಗೂ ಕಾಲೇಜಿನ ಹಿರಿಯ ಯೋಜನಾಧಿಕಾರಿಗಳು, ವಿದ್ಯಾರ್ಥಿ ನಾಯಕರು ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು.
ಸ್ವಯಂಸೇವಕರು ಪ್ರಾರ್ಥಿಸಿ, ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಸ್ವಾಗತಿಸಿದರು. ದೀಕ್ಷಿತ್ ರೈ ಮತ್ತು ಕು. ಸಿಂಚನ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ದೀಪಾ ಆರ್.ಪಿ. ವಂದಿಸಿದರು.