30.3 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

ಗೋವಾ :ಗೋವಾ ರಾಜ್ಯದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ತುಳು ಕೂಟ ಗೋವಾದ ಉದ್ಘಾಟನಾ ಸಮಾರಂಭ ಅಕ್ಟೋಬರ್ 20 ರಂದು ಗೋವಾ ರಾಜಧಾನಿ ಪಣಜಿಯಲ್ಲಿ ನಡೆಯಲಿದೆ. ತುಳು ಕೂಟ ಗೋವಾದ ಫೇಸ್ ಬುಕ್ ಪೇಜ್ ನ್ನು ಆರಂಭಿಸಲಾಗಿದ್ದು, ಇದಕ್ಕೆ ಪರ್ವರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅಧೀಕೃತವಾಗಿ ಬಿಡುಗಡೆಗೊಳಿಸಲಾಯಿತು ಎಂದು ತುಳು ಕೂಟ ಗೋವಾದ ಅಧ್ಯಕ್ಷರಾದ ಇರ್ವತ್ತೂರು ಗಣೇಶ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಪರ್ವರಿಯಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ತುಳು ಕೂಟ ಗೋವಾದ ಸಮೀತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಕ್ಟೋಬರ್ 20 ರಂದು ತುಳು ಕೂಟ ಗೋವಾದ ಉದ್ಘಾಟನಾ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲಿದ್ದೇವೆ. ಈ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ಪೂರ್ವ ಸಿದ್ಧತಾ ಕಾರ್ಯಗಳ ಕುರಿತು ಚರ್ಚೆ ನಡೆಸಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಸಾಂಸ್ಕಂತಿಕ ಕಾರ್ಯಕ್ರಮವನ್ನೂ ಆಯೋಜಿಸಲಾಗುವುದು ಎಂದು ಗಣೇಶ ಶೆಟ್ಟಿ ಇರ್ವತ್ತೂರು ಮಾಹಿತಿ ನೀಡಿದರು.

ಈ ಸಭೆಯಲ್ಲಿ ತುಳು ಕೂಟ ಗೋವಾದ ಗೌರವಾಧ್ಯಕ್ಷ ಚಂದ್ರಹಾಸ ಅಮಿನ್, ಅಧ್ಯಕ್ಷರಾದ ಗಣೇಶ ಶೆಟ್ಟಿ ಇರ್ವತ್ತೂರು, ಉಪಾಧ್ಯಕ್ಷ ನಾಗೇಶ್ ಪೂಜಾರಿ. ಕಾರ್ಯದರ್ಶಿ ಶಶಿಧರ್ ನಾಯಕ್, ಪ್ರಶಾಂತ್ ಜೈನ್ , ಉಪಾಧ್ಯಕ್ಷ ಶಶಿಧರ ರೈ, ಜಗದೀಶ ಶೆಟ್ಟಿ, ಪ್ರಕಾಶ್ ಪೂಜಾರಿ , ರೇವತಿ ಅಮಿನ್, ಸೇರಿದಂತೆ ಪದಾಧಿಕಾರಿಗಳು ಉಪಸ್ಥಿದ್ದರು

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಕಣಿಯೂರು ನ ಯೂನಿತ್. ಕೆ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya
error: Content is protected !!