
ಉಜಿರೆ :ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉಜಿರೆ ಗ್ರಾಮದ ಇಚ್ಚಿಲ ನಿವಾಸಿ ಸುಂದರ ಗೌಡ ಇವರು ಅಲ್ಪ ಕಾಲದ ಅನಾರೋಗ್ಯದಿಂದ ಅಕ್ಟೋಬರ್ 06 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾದರು. ಮೃತರು ಪತ್ನಿ ನಿವೃತ್ತ ಶಿಕ್ಷಕಿ ವಾರಿಜ ಒಂದು ಗಂಡು ಮಗ, ಇಬ್ಬರು ಹೆಣ್ಣು ಮಕ್ಕಳು ಅಪಾರ ಅಭಿಮಾನಿಗಳು ಬಂಧು ಮಿತ್ರರನ್ನು ಅಗಲಿದ್ದಾರೆ