ಮಡಂತ್ಯಾರು : ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ದೇವಸ್ಥಾನದಲ್ಲಿ ನಡೆಯುತ್ತಿದೆ.
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ರಾತ್ರಿಯಲ್ಲಿ ಅ.3 ರಂದು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ನಾಳ, ಅ.4 ರಂದು ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ಗೇರುಕಟ್ಟೆ,ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಪಿಲಿಗೂಡು,ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡಿಲು, ಅ.5 ರಂದು ಸಂಜೆ ಸ್ಥಳೀಯ ಹವ್ಯಾಸಿ ಕಲಾವಿದರಿಂದ ಸಮರ ಸನ್ನಾಹ ಯಕ್ಷಗಾನ ತಾಳಮದ್ದಳೆ, ರಾತ್ರಿ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ರಕ್ತೇಶ್ವರಿಪದವು,ಶ್ರೀ ಉಳ್ಳಾಯ ಉಳ್ಳಾಲ್ತಿ ಭಜನಾ ಮಂಡಳಿ ಚಾರ್ಮಾಡಿ ಭಜನಾ ತಂಡಗಳಿಂದ ಭಜನೋತ್ಸವ ನಡೆಯಿತು.
ವೇ.ಮೂ.ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ, ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ನಡೆಯಿತು.
ಆಡಳಿತಾಧಿಕಾರಿ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿ, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರು, ಸದಸ್ಯರು ದೇವಸ್ಥಾನದ ಸಿಬ್ಬಂದಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.