38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

ಉಜಿರೆ : ಇಂದು ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ ನಮ್ಮ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಇರುವುದರಿಂದ ಜೀವನದಲ್ಲಿ ನಾವು ಯಾವ ರೀತಿಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದೇವೆ ಅನ್ನುವುದರ ಮೂಲಕ ನಮ್ಮ ಯಶಸ್ವ ಇರುತ್ತದೆ. ಸ್ವಯಂ ಶಿಸ್ತು ಅಳವಡಿಸಿಕೊಂಡು ಉತ್ತಮ ಆಚಾರ, ವಿಚಾರ ಗಳನ್ನು ಅನುಸರಿಸಿ, ಜೊತೆಗೆ ಉತ್ತಮವಾದ ಆಹಾರ ಪದ್ಧತಿ ಅಳವಡಿಸಿಕೊಂಡು ಅದಕ್ಕೆ ಸರಿಯಾದ ವಿಹಾರ ಮಾಡಿಕೊಂಡಲ್ಲಿ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಬಹುದು. ಇದಕ್ಕೆ ಪೂರಕವಾಗಿ ನಿಮಗೆ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ರುಡ್ ಸೆಟ್ ಸಂಸ್ಥೆಯಲ್ಲಿ ಅತ್ಯತ್ತುಮವಾದ ತರಬೇತಿಯನ್ನು ಪಡೆದುಕೊಂಡಿದ್ದೀರಿ ಅದನ್ನು ಜೀವನದಲ್ಲಿ ಮತ್ತು ಸ್ವ ಉದ್ಯೋಗದಲ್ಲಿ ಉಪಯೋಗಿಸಿಕೊಂಡು ಯಶಸ್ವಿಗಳಿಸಿ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಶುಂಪಾಲರಾದ ಡಾ. ಬಿ. ಎ. ಕುಮಾರ್ ಹೆಗ್ಡೆ ಅಭಿಪ್ರಾಯಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ * ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ಮಾತನಾಡಿದರು. ಮೌಲ್ಯ ಮತ್ತು ಕೌಶಲ್ಯವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ.ವಿಜಯ ಕುಮಾರ್ ವಹಿಸಿ, ಮಾತನಾಡಿದರು ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ *ಅಬ್ರಹಾಂ ಜೇಮ್ಸ್* ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕ ಕೆ.ಕರುಣಾಕರ ಜೈನ್* ವಂದಿಸಿದರು. ಸುಮಾರು 27 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು, ಸಂದೀಪ್ ಮತ್ತು ಯೋಗೀಶ್ ಪ್ರಾರ್ಥನೆ ಮಾಡಿದರು, ಗಣೇಶ್, ರಮೇಶ್, ಗುರುಕಿರಣ್ ತರಬೇತಿಯ ಅನುಭವ ಹಂಚಿಕೊಂಡರು.

Related posts

ಧರ್ಮಸ್ಥಳ : ಸಿಂದೂರ ಮಹಿಳಾ ವಿಭಾಗಕ್ಕೆ ಗಣ್ಯರಿಂದ ಮೆಚ್ಚುಗೆ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

Suddi Udaya

ಬೆಳ್ತಂಗಡಿ : ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್ & ಫರ್ನಿಚರ್‍ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

Suddi Udaya

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!