April 2, 2025
ಗ್ರಾಮಾಂತರ ಸುದ್ದಿ

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

ಬೆಳ್ತಂಗಡಿ : ನೆರಿಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಭಾರೀ ಮಳೆ ಸುರಿದಿದ್ದು ನೆರಿಯ ಸೇತುವೆ ಮತ್ತೆ ಮುಳುಗಡೆಯಾಗಿದ್ದು ಜನರು ಆತಂಕದಲ್ಲಿದ್ದಾರೆ.
ನೆರಿಯ ಗ್ರಾಮದ ಕಾಟಾಜೆ, ಪುಲ್ಲಾಜೆ ಪರಿಸರದಲ್ಲಿ ಭಾರೀ ನೀರು ಹರಿದು ಬಂದಿದ್ದು ತೋಟಗಳು ಗದ್ದೆಗಳು ಜಲಾವೃತಗೊಂಡಿದೆ.

ಭಾರೀ ಪ್ರಮಾಣದಲ್ಲಿ ಕೆಸರು ಮಿಶ್ರಿತ ನೀರು ನದಿಯಲ್ಲಿ ಹರಿದು ಬಂದಿದೆ. ಮಂಗಳವಾರ ರಾತ್ರಿಯ ವೇಳೆ ಇದೇ ರೀತಿಯಲ್ಲಿ ನೆರಿಯ ಹೊಳೆಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು . ಇದೀಗ ಬುಧವಾರ ಮತ್ತೆ ಪ್ರವಾಹದಂತೆ ನದಿಯಲ್ಲಿ ನೀರು ಬಂದಿರುವುದು ಜನರಲ್ಲಿ ಭಯ ಮೂಡಿಸಿದೆ.

ಅಪರಾಹ್ನ ನೆರಿಯ ಪ್ರದೇಶದಲ್ಲಿ ಸಾಮಾನ್ಯ ಮಳೆ ಮಾತ್ರ ಸುರಿದಿದೆ. ಆದರೂ ನದಿಯಲ್ಲಿ ಹಾಗೂ ತೊರೆಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಏರಿಕೆಯಾಗಿದೆ.
ಚಾರ್ಮಾಡಿ ಘಾಟಿಯ ಮೇಲ್ಬಾಗದಿಂದ ಹರಿದು ಬಂದ ನೀರು ನೇರವಾಗಿ ನೆರಿಯ ಹಳ್ಳವನ್ನು ಸೇರುತ್ತಿದ್ದು ಘಾಟಿಯ ಮೇಲ್ಬಾಗದಲ್ಲಿ ಸುರಿದ ಮಳೆಯಿಂದಾಗಿ
ನೆರಿಯದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.

Related posts

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya
error: Content is protected !!