September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 2ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಅವರ ನೇತ್ರತ್ವದಲ್ಲಿ ಅ.8 ಮತ್ತು ಅ.9ರಂದು ವಿಜೃಂಭಣೆಯಿಂದ ನಡೆಯಲಿದೆ.

ಅ.8ರಂದು ಬೆಳಿಗ್ಗೆ ಗಣಹೋಮ, ಕಿರಾತಮೂರ್ತಿ ದೇವರಿಗೆ ರುದ್ರಾಭಿಷೇಕ, ಮಹಾಪೂಜೆ, ರಾತ್ರಿ ದುರ್ಗಾ ದೀಪ ನಮಸ್ಕಾರ ಪೂಜೆ ಜರಗಿತು.

ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ವಿಠಲ ನಾಯಕ್ ಕಲ್ಲಡ್ಕ ಮತ್ತು ಬಳಗದವರಂದ ತುಳು ಗೀತ- ಸಾಹಿತ್ಯ- ಸಂಭ್ರಮ ನಡೆಯಿತು.

ಅ.9 ರಂದು ಜರುಗಿದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎನ್.ಆರ್. ದಾಮೋದರ್ ಶರ್ಮ ವಾಗ್ಮಿಗಳು ಬಾರ್ಕೂರು, ಇವರು ಧಾರ್ಮಿಕ ಉಪನ್ಯಾಸ ನೀಡಿದರು.
ಶ್ರೀ ರಾಜಶೇಖರಾನಂದ ಸ್ವಾಮಿಜಿ ವಜ್ರದೇಹಿ ಮಠ ಗುರುಪುರ ಆಶೀರ್ವಚನ ನೀಡಿದರು.

ವೇದಿಕೆಯಲ್ಲಿ ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ರಾಮಣ್ಣ ಕುಲಾಲ್ ಕೋಲಾಜೆ, ಅಧ್ಯಕ್ಷ ನಿತೇಶ್ ಕೆ ಓಡಿಲ್ನಾಳ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಶೆಟ್ಟಿ, ಭಜನಾ ಸಮಿತಿ ಅಧ್ಯಕ್ಷ ಯೋಗೀಶ್ ಅಡ್ಡಕೊಡಂಗೆ ಉಪಸ್ಥಿತರಿದ್ದರು.

ದುರ್ಗಾಂಭ ಭಜನಾ ಮಂಡಳಿ ಬಂಟ್ವಾಳ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾ ಪೂಜೆ ಪ್ರಸಾದ ವಿತರಣೆ ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು. ಸಮಿತಿ ಕೋಶಾಧಿಕಾರಿ ಸುದೀಪ್ ಶೆಟ್ಟಿ ಸ್ವಾಗತಿಸಿ, ಮಹಿಳಾ ಸಮಿತಿ ಅಧ್ಯಕ್ಷೆ ಭಾರತಿ ಸುರೇಶ್ ಶೆಟ್ಟಿ ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ ಬಂಟರ ವಲಯ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya

ಹೊಸಂಗಡಿ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!