24.6 C
ಪುತ್ತೂರು, ಬೆಳ್ತಂಗಡಿ
May 18, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

ಮುಂಡಾಜೆ: ಭೀಕರ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಕಿಂಡಿ ಅಣೆಕಟ್ಟುವಿನಲ್ಲಿ ಮರದ ದಿಮ್ಮಿಗಳು ಶೇಖರಣೆಗೊಂಡ ಪರಿಣಾಮ ಸ್ಥಳೀಯ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಅ.6ರಂದು ನಡೆದಿದೆ.

ಸ್ಥಳೀಯರಾದ ಅವಿನಾಶ್ ಗೋಖಲೆ, ಶ್ರೀನಿವಾಸ್ ಗೋಖಲೆ, ಸಂಜೀವ್ ಶೆಟ್ಟಿ, ದಯಾನಂದ ಶೆಟ್ಟಿ ಮುಂತಾದವರ ತೋಟಕ್ಕೆ ನೀರು ನುಗ್ಗಿ ಹಾನಿಯಾಗಿದೆ.

2019ರಲ್ಲಿ ಪ್ರವಾಹ ಬಂದ ನಂತರ, ಅಂತರ್ಜಲ ಅಭಿವೃದ್ದಿ ಮತ್ತು ಸಣ್ಣ ನೀರಾವರಿ ಯೋಜನೆಯಡಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದ್ದು, ಕಿಂಡಿ ಅಣೆಕಟ್ಟು ಸ್ಥಳೀಯ ತೋಟದ ಮಟ್ಟಕ್ಕೆ ಸಮವಾಗಿರುವ ಕಾರಣ ಪ್ರವಾಹದಲ್ಲಿ ಕೊಚ್ಚಿ ಬಂದ ಮರದ ದಿಮ್ಮಿಗಳು ಕಿಂಡಿ ಅಣೆಕಟ್ಟಿನಲ್ಲಿ ನಿಂತು ನೀರು ತೋಟಗಳಿಗೆ ನುಗ್ಗುತ್ತಿದೆ.

ಅಸಮರ್ಪಕವಾದ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ. ಸ್ಥಳೀಯ ನಾಯಕರುಗಳು ತಡೆಗೋಡೆ ಕಟ್ಟಿಸಿ ಕೊಡುತ್ತೇವೆ ಎಂಬ ಭರವಸೆಯನ್ನು ನೀಡಿದ್ದು ಇದುವರೆಗೂ ಆ ಕೆಲಸವಾಗಿಲ್ಲ. ಪಂಚಾಯತ್‌ನವರಿಗೆ ಕರೆ ಮಾಡಿ ತಿಳಿಸಿದರೂ ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya
error: Content is protected !!