26.5 C
ಪುತ್ತೂರು, ಬೆಳ್ತಂಗಡಿ
September 20, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

ಬೆಳ್ತಂಗಡಿ: ಮಂಗಳೂರಿನ ಹೆಸರಾಂತ ಲೋಟಸ್‌ ಪ್ರಾಪರ್ಟೀಸ್‌ ಬಿಲ್ಡರ್ಸ್‌ ಸಂಸ್ಥೆಯ ಪಾಲುದಾರ, ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಇಬ್ಬರು ಯುವಕರನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿಯವರ ಅಣ್ಣನ ಮಗ, ಮಂಗಳೂರಿನಲ್ಲಿ ಎನ್‌ಎಸ್‌ ಯುಐ ಕಾರ್ಯಕರ್ತನಾಗಿರುವ ತನುಷ್‌ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧಿತರು.

ತನುಷ್‌ ಶೆಟ್ಟಿ ಕಳೆದ ಚುನಾವಣೆ ಸಂದರ್ಭದಲ್ಲಿ ನೋಟಾ ಪರವಾಗಿ ಅಭಿಯಾನ ನಡೆಸಿದ್ದ ಜಿತೇಂದ್ರ ಕೊಟ್ಟಾರಿ ಬುಧವಾರ ಸಂಜೆ ಏರ್ಪೋರ್ಟ್ ಕಡೆಯಿಂದ ತನ್ನ ಆಡಿ ಕಾರಿನಲ್ಲಿ ಬಂದಿದ್ದು, ಈ ವೇಳೆ ಯುವಕರಿದ್ದ ಕಾರನ್ನು ಓವರ್ ಟೇಕ್ ಮಾಡಿಕೊಂಡು ಬಂದಿದ್ದರು ಎನ್ನಲಾಗಿದೆ.

ಇದೇ ಕಾರಣಕ್ಕೆ ಹಿಂಬಾಲಿಸಿಕೊಂಡು ಬಂದಿದ್ದ ಯುವಕರು, ಜಿತೇಂದ್ರ ಕೊಟ್ಟಾರಿ ಅವರು ತನ್ನ ಕೊಡಿಯಾಲಬೈಲಿನ ಮನೆಗೆ ತಲುಪಿದಾಗ, ಅವಾಚ್ಯವಾಗಿ ನಿಂದಿಸಿ ಮನೆಯ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಅಲ್ಲದೆ, ಕಾರನ್ನು ಕಾಂಪೌಂಡ್ ಒಳಗಡೆ ತಂದು ಜಿತೇಂದ್ರ ಕೊಟ್ಟಾರಿ ಮತ್ತು ಅವರ ಪತ್ನಿಯ ಮೇಲೆ ಕೈಮಾಡಲು ಯತ್ನಿಸಿದ್ದಾರೆ. ಕೂಡಲೇ ಕೊಟ್ಟಾರಿ ಬರ್ಕೆ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಸ್ಥಳದಿಂದಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

Suddi Udaya

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ನಾರಾವಿ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರಿಗೆ ಬೀಳ್ಕೊಡುಗೆ

Suddi Udaya

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya
error: Content is protected !!