28.6 C
ಪುತ್ತೂರು, ಬೆಳ್ತಂಗಡಿ
September 19, 2026
Uncategorized

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

ಉಜಿರೆ : ದೈಹಿಕ ಆರೋಗ್ಯದೊಂದಿಗೆ ಮಾನಸಿಕಆರೋಗ್ಯ ರಕ್ಷಣೆಗೂ ಎಲ್ಲರೂ ಆದ್ಯತೆ ನೀಡಬೇಕು ಎಂದು ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯ ನೇತ್ರವೈದ್ಯ ಮತ್ತು ವೈದ್ಯಕೀಯ ನಿರ್ವಹಣಾಧಿಕಾರಿ ಡಾ. ರಮೇಶ್ ಹೇಳಿದರು.


ಅವರು ಅ. 10 ರಂದು ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಮಾನಸಿಕ ಆರೋಗ್ಯದ ಮಹತ್ವವನ್ನು ವಿವರಿಸಿದರು.
ಎಸ್.ಡಿ.ಎಮ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿದರು.


160ಕ್ಕೂ ಹೆಚ್ಚು ಮಂದಿ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದರು. ಐದು ಕಿಲೋಮೀಟರ್ ಪೂರೈಸಿದ ಮೊದಲ ಐದು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಮನೋವಿಜ್ಞಾನ ಸ್ನಾತಕೋತರ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳು ನಾಟಕ ಪ್ರದರ್ಶನದ ಮೂಲಕ ಮಾನಸಿಕ ಆರೋಗ್ಯ ರಕ್ಷಣೆ ಮತ್ತು ಮದ್ಯವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.


ಪೂರಣ್‌ವರ್ಮ, ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ವಂದನಾ ಜೈನ್, ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್, ಹೆಚ್ ಕಾರ್ಯಕ್ರಮ ಸಂಯೋಜಕಿ ಅಶ್ವಿನಿ ಎಚ್., ಡಾ. ಮಹೇಶ್‌ಬಾಬು, ಅಶ್ವಿನಿ ಶೆಟ್ಟಿ. ಸಿಂಧು, ವಿ.ರಮ್ಯಾ ಕೆ ಮತ್ತು ಡಾ. ಸುಧೀರ್ ಕೆ.ವಿ. ಉಪಸ್ಥಿತರಿದ್ದು ಸಹಕರಿಸಿದರು.

Related posts

ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಕುಸುಮಾವತಿಯವರೊಂದಿಗೆ ಮಾತುಕತೆ

Suddi Udaya

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಪಿಷ್ಟ ಸ್ಥಿತಿಗೆ ತಲುಪಿದಾಗ ಪಕ್ಷವನ್ನು ಕಟ್ಟಿ ಬೆಳೆಸಿದವರು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್: ರಾಜಕೀಯ ನಿವೃತ್ತಿಯೆಂದು ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರಿಂದ ಆಗ್ರಹ: ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹಾಗೂ ಕಾಂಗ್ರೇಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

Suddi Udaya

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya
error: Content is protected !!