September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ತನ್ನ ಸಾಂತ್ವನ ನಿಧಿಯಿಂದ ಒಟ್ಟುಗೂಡಿಸಿದ ಸಹಾಯಧನದ ಮೊತ್ತವನ್ನು ಇತ್ತೀಚೆಗೆ ಸುರಿದ ಭಾರಿ ಮಳೆಗೆ ತನ್ನ ಮನೆಯ ಒಂದು ಪಾರ್ಶ್ವ ಸಂಪೂರ್ಣ ಬಿರುಕುಗೊಂಡು ಮನೆ ಸಂಪೂರ್ಣ ಕುಸಿಯುವ ಭೀತಿಯಲ್ಲಿರುವ ಗುರಿಪಳ್ಳದ ಹೆಬ್ಬಾರ್ ದೊಡಿ ನಿವಾಸಿ ನೋಣಯ್ಯ ಪೂಜಾರಿ ಇವರ ಕುಟುಂಬಕ್ಕೆ ಹತ್ತು ಸಾವಿರ ಮೊತ್ತದ ಚೆಕ್ ಹಸ್ತಾಂತರಿಸುವ ಮೂಲಕ ವಿತರಿಸಲಾಯಿತು.

ನೋಣಯ್ಯ ಪೂಜಾರಿಯವರ ಪತ್ನಿ ಶ್ರೀಮತಿ ಬೇಬಿ ಇವರು ಶ್ರಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಇವರಿಂದ ಚೆಕ್ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಕಾರ್ಯದರ್ಶಿ ನಿತೀಶ್ ಕೋಟ್ಯಾನ್, ಯುವಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ.ಪ್ರಸಾದ್, ಯುವವಾಹಿನಿ ಬೆಳ್ತಂಗಡಿ ಅಧ್ಯಕ್ಷ ಸದಾಶಿವ ಊರ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕರಾದ ಗುರುರಾಜ್ ಗುರಿಪಳ್ಳ, ಜಯ ಕುಮಾರ್ ನಡ, ಚಂದ್ರಶೇಖರ್ ಇಂದಬೆಟ್ಟು, ಗ್ರಾಮ ಸಮಿತಿ ಅಧ್ಯಕ್ಷ ಪ್ರಸಾದ್ ಕುಮಾರ್, ಯುವವಾಹಿನಿ ಸಂಚಾಲನ ಸಮಿತಿ ಗುರಿಪಳ್ಳ ಅಧ್ಯಕ್ಷ ಜಯರಾಮ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಶ್ರೀಮತಿ ದೇವಕಿ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya
error: Content is protected !!