
ಬೆಳ್ತಂಗಡಿ : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಬಂಟರ ಸಂಘ ಬೆಂಗಳೂರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇವರ ಸಹಭಾಗಿತ್ವದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ – ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವು ಅ.13 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಿತು
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ- ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ದೀಪ ಬೆಳಗಿಸಿ

ನೆರವೇರಿಸಿ ಮಾತನಾಡಿ, ಮಾತೃ ಸಂಘದ ವತಿಯಿಂದ ‘ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಸಮಾಜದ ಪ್ರತಿಯೊಂದು ಕುಟುಂಬದ ಮಾಹಿತಿ ಸಂಗ್ರಹ ನಡೆಸಲಾಗುತ್ತಿದೆ, ಇಂದಿನ ಆಧುನಿಕತೆಗೆ ತಕ್ಕಂತೆ ಇದನ್ನು ಡಿಜಲೀಟರಿಕರಣ ಮಾಡಲು ನಿಧ೯ರಿಸಲಾಗಿದೆ. ಈಗಾಗಲೇ 230 ಮಂದಿಗೆ ತರಬೇತಿ ನೀಡಲಾಗಿದ್ದು, ಇವರು ಪ್ರತಿ ಮನೆಗೆ ಬರುವಾಗ ಪೂರ್ತಿ ಮಾಹಿತಿ ನೀಡಿ ಸಹಕರಿಸುವಂತೆ ಕರೆ ನೀಡಿದರು.
ಅಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಬಿ. ಜಯಂತ ಶೆಟ್ಟಿ ಭಂಡಾರಿಗುಡ್ಡೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮಾತೃ ಸಂಘದ ತಾಲೂಕು ಸಂಚಾಲಕ ಜಯರಾಮ್ ಭಂಡಾರಿ ಧಮ೯ಸ್ಥಳ,
ಬೆಳ್ತಂಗಡಿ ಬಂಟರ ಸಂಘದ ಮಾಜಿ ಅಧ್ಯಕ್ಷ ಜಯರಾಮ್ ಶೆಟ್ಟಿ. ಮುಂಡಾಡಿ ಗುತ್ತು, ಬಂಟರ ಸಂಘ ಬೆಂಗಳೂರಿನ ವಿದ್ಯಾರ್ಥಿ ನಿಧಿ ಸಂಚಾಲಕ ಉಮೇಶ್ ಶೆಟ್ಟಿ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ವಿವೇಕ್ ಆಳ್ವ, ಬೆಳ್ತಂಗಡಿ

ಸಂಘದ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಉಪಾಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ , ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ಧಾ, ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷ ಜಯಲಕ್ಷ್ಮಿ ಎನ್ ಸಾಮಾನಿ, ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ , ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಅಹ೯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ನೇರವೇರಿಸಲಾಯಿತು. ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು.
ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮ ನಿರೂಪಿಸಿ. ವಿದ್ಯಾ ನಿಧಿ ಸಂಚಾಲಕರಾದ ಅಜಿತ್ ಜಿ.ಶೆಟ್ಟಿ ಸ್ವಾಗತಿಸಿದರು. ಉಪಾಧ್ಯಕ್ಷರಾದ ನವೀನ ಸಾಮಾನಿ ಧನ್ಯವಾದವಿತರು.
.