24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

ನೆರಿಯ: ಸಿಯೋನ್ ಅಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಅ.12.10.2024ರಂದು ದಸರಾ ಹಬ್ಬವನ್ನು ಸಂಭ್ರಮದಿಂದ ಆಶ್ರಮನಿವಾಸಿಗಳೊಂದಿಗೆ ಆಚರಿಸಲಾಯಿತು. ಸಭಾಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನಲಂಕರಿಸಿದ್ದ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ.ಯು.ಸಿ.ಪೌಲೋಸ್ ರವರು ಎಲ್ಲರಿಗೂ ಶುಭಹಾರೈಸುತ್ತಾ ಮಾತನಾಡಿ, ದಸರಾ ಹಬ್ಬವನ್ನು ಯಾವುದೇ ಜಾತಿ-ಮತ, ಭೇದ-ಭಾವವಿಲ್ಲದೆ ಎಲ್ಲರೂ ಒಟ್ಟಾಗಿ ಆಚರಿಸಿ, ಸಂತೋಷವನ್ನು ಹಂಚಿಕೊಳ್ಳುವ ನಾಡಹಬ್ಬವಾಗಿದೆ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಪ್ರಾಮುಖ್ಯತೆಯನ್ನು ಹೊಂದಿರುವ ಬಹುಮುಖಿ ಹಬ್ಬವಾಗಿದೆ ಎಂದರು.

ಅತಿಥಿಗಳಾಗಿ ಸಂಸ್ಥೆಯ ವೈದ್ಯರಾದ ಡಾ. ಶಿವಾನಂದ ಸ್ವಾಮಿಯವರು, ನವರಾತ್ರಿಯಲ್ಲಿ ನವದುರ್ಗೆಯರನ್ನು ಆರಾಧಿಸುವ ರೀತಿ ಮತ್ತು ಮಹತ್ವದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. ಸಂಸ್ಥೆಯ ಟ್ರಸ್ಟೀ ಸದಸ್ಯೆ ಶ್ರೀಮತಿ ಮೇರಿ ಯು.ಪಿ.ಯವರು, ಆಶ್ರಮನಿವಾಸಿಗಳಾದ ರವಿ ಮತ್ತು ಸರಸ್ವತಿಪ್ರಿಯರವರು ಉಪಸ್ಥಿತರಿದ್ದರು..


ಸಭಾಕಾರ್ಯಕ್ರಮದ ನಂತರ ಆಶ್ರಮನಿವಾಸಿಗಳಿಂದ ಮತ್ತು ಸಿಬ್ಬಂದಿವರ್ಗದವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ದಸರಾ ಹಬ್ಬದ ಪ್ರಯುಕ್ತ ಆಶ್ರಮನಿವಾಸಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya
error: Content is protected !!