23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

ಬೆಳ್ತಂಗಡಿ: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ನವೆಂಬರ್ 10 ರಂದು ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನ ರೆಖ್ಯದಲ್ಲಿ ನಡೆಯಲಿರುವ ಹಿಂದೂ ರಾಷ್ಟ ಜಾಗೃತಿ ಸಭೆಯ ಕುರಿತು ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಆನಂದ ಗೌಡ ರವರು ಮಾತಾನಾಡುತ್ತ ಇಂದು ಜಗತ್ತಿನಲ್ಲಿ 157 ಕ್ರೈಸ್ತ, 52 ಮುಸ್ಲಿಂ, 13 ಬೌದ್ಧ ಮತ್ತು 1 ಯಹೂದಿ ರಾಷ್ಟ್ರಗಳಿವೆ. ಆದರೆ ಹಿಂದೂಗಳಿಗೆ ಒಂದೇ ಒಂದು ರಾಷ್ಟ್ರವಿಲ್ಲ. ಜಾತ್ಯತೀತ ಭಾರತದ 9 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಜಾತ್ಯತೀತ ಸರಕಾರವು ದೇವಾಲಯಗಳನ್ನು ಸ್ವಾಧೀನ ಪಡಿಸಿಕೊಳ್ಳುತ್ತವೆ ಮತ್ತು ಹಿಂದೂಗಳ ತೀರ್ಥಯಾತ್ರೆಗಳ ಮೇಲೆ ತೆರಿಗೆಯನ್ನು ಹೇರುತ್ತದೆ. ಮತಾಂತರ, ಲವ್ ಜಿಹಾದ್, ಉಗುಳು ಜಿಹಾದ್ ಮುಂತಾದ ಷಡ್ಯಂತ್ರಗಳು ಬಯಲಾಗುತ್ತಿವೆ. ಆದುದರಿಂದ ಇದಕ್ಕೆಲ್ಲ ಒಂದೇ ಪರಿಹಾರ ಭಾರತವನ್ನು ಸವಿಂಧಾನಬದ್ಧವಾಗಿ ಹಿಂದೂರಾಷ್ಟ್ರವೆಂದು ಘೋಷಣೆ ಮಾಡಬೇಕೆಂದು ಅ.13 ರಂದು ಶ್ರೀ ಗುಡ್ರಾಮಲ್ಲೇಶ್ವರ ಸಭಾಗ್ರಹದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.


ಈ ಪೂರ್ವಭಾವಿ ಸಭೆಯಲ್ಲಿ ಜಯರಾಮ ನೆಲ್ಲಿತ್ತಾಯ ಧಾರ್ಮಿಕ ಮುಂದಾಲು ಹಾಗೂ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅಭಿವೃದ್ಧಿಯ ನಿಕಟಪೂರ್ವ ಅಧ್ಯಕ್ಷ ದಾಮೋದರ ಗೌಡ ಕೊಲೆಚ್ಚಾವು ನಾಲೆಕ್ಕಿ ಗುತ್ತಿನ ಮನೆ, ಹಾಗೂ ಶಿಶಿಲ, ಶಿಬಾಜೆ, ಹತ್ಯಡ್ಕ, ರೆಖ್ಯಾ ಗ್ರಾಮದ ಹಿಂದುತ್ವನಿಷ್ಟರು, ಹಾಗೂ ಧರ್ಮ ಪ್ರೇಮಿಗಳು ಉಪಸ್ಥಿತರಿದ್ದರು.

ನವೆಂಬರ್ 10 ರಂದು ನಡೆಯಲಿರುವ ಹಿಂದೂ ರಾಷ್ಟ್ರ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಧರ್ಮ ಪ್ರೇಮಿಗಳು, ಬಂಧು ಭಗೀನಿಯರು ಭಾಗಿಯಾಗಬೇಕು ಮತ್ತು ಹೆಚ್ಚು ಸಂಖ್ಯೆ ಸೇರಿಸುವಲ್ಲಿ ನಾವೆಲ್ಲರೂ ಕೈ ಜೋಡಿಸಿ ಸಭೆಯನ್ನು ಯಶಸ್ವೀಗೊಳಿಸಿ ರಾಷ್ಟ್ರ ಹಾಗೂ ಧರ್ಮದ ಆ ಭಗವಂತನ ಕಾರ್ಯದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವ ಎಂದು ಕರೆ ನೀಡಿದರು.


ಸಮಿತಿಯ ಬಾಲಕೃಷ್ಣ ಗೌಡ, ಯಂ.ಹರೀಶ್, ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಹಿಂದೂ ಜನಜಾಗೃತಿ ಸಮಿತಿ ಸೇವಕ ದಾಮೋದರ ಗೌಡ ಇವರು ಧನ್ಯವಾದವಿತ್ತರು.

Related posts

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!