September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

ಬೆಳ್ತಂಗಡಿ : ವಕೀಲರ ಸಂಘ (ರಿ) ಬೆಳ್ತಂಗಡಿ ಇದರ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮವನ್ನು ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ್ ಕೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ ಹೆಚ್, ಹಿರಿಯ ಸಮಿತಿಯ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಹಿರಿಯ ವಕೀಲರಾದ ಮಹಮ್ಮದ್ ಹನೀಫ್ ಹಾಗೂ ಶ್ರೀಮತಿ ಮುಮ್ತಾಜ್ ಬೇಗಂ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಬಂಟ್ವಾಳದ ವಕೀಲರಾದ ಇಮ್ತಿಯಾಜ್ ಬಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.


ಕಾರ್ಯಕ್ರಮದಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆ ಹಾಗೂ ಧನ್ಯವಾದವನ್ನು ವಕೀಲರಾದ ನವಾಜ್ ಶರೀಫ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕವಾಳಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.

ಈ ಕಾರ್ಯಕ್ರಮದಲ್ಲಿ ವಕೀಲರಗಳು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮುಂಡಾಜೆ ಗ್ರಾ.ಪಂ. ಸಿಬ್ಬಂದಿ ಜನಾರ್ದನ ನಾಯ್ಕ ನಿಧನ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಮುಂಡಾಜೆ: ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಓ ಎ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!