31.8 C
ಪುತ್ತೂರು, ಬೆಳ್ತಂಗಡಿ
May 18, 2025
ಸಾಧಕರು

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದಶಿಯಾಗಿ ಡಾ.. ಕೆ. ಜಯಕೀರ್ತಿ ಜೈನ್ನೇಮಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ (ರಿ) ಬೆಂಗಳೂರು ಕೇಂದ್ರ ಸಂಘದ ಮೈಸೂರು ವಿಭಾಗ ಮಟ್ಟದ ಸಂಘಟನಾ ಕಾರ್ಯದರ್ಶಿಯನ್ನಾಗಿ ರಾಜ್ಯ ಸಂಘದ ಅಧ್ಯಕ್ಷರಾದ ಡಾ. ಎಲ್ ಭಯರಪ್ಪರವರು ಡಾ. ಕೆ. ಜಯಕೀರ್ತಿ ಜೈನ್, ಧರ್ಮಸ್ಥಳ, ಇವರನ್ನು ಇಂದು ನೇಮಕ ಮಾಡಿದ್ದಾರೆ.

ಜಯಕೀತಿ೯ ಜೈನ್ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ಸಂಘಟನಾ ಕಾರ್ಯದರ್ಶಿಯಾಗಿ, 25 ವರ್ಷ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ, ಪಶು ವೈದ್ಯಕೀಯ ಪರಿವೀಕ್ಷಕರಾಗಿ, ಸಂಘದಲ್ಲಿ 35 ವರ್ಷ ಜಿಲ್ಲಾಧ್ಯಕ್ಷರಾಗಿ, ವೇಣೂರು ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಸರಕಾರದಿಂದ ಸಮನ್ವಯಾಧಿಕಾರಿಯಾಗಿ ಕೆಲಸ ನಿರ್ವಹಣೆ ಮಾಡಿದ್ದಾರೆ.

ಪ್ರಸ್ತುತ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ‌ ಅಧ್ಯಕ್ಷರಾಗಿ, ಮಹಾವೀರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ, ಶ್ರೀ ಕ್ಷೇತ್ರ ಚಂದ್ರಪುರ, ಶಿಶಿಲ ಆಡಳಿತ ಮಂಡಳಿಯ ಸಂಚಾಲಕರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತಿದ್ದಾರೆ.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ

Suddi Udaya
error: Content is protected !!