31.1 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

ಅಳದಂಗಡಿ: ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ ಇವರ ಆಯೋಜಕತ್ವದಲ್ಲಿ ಪ್ರಪ್ರಥಮ ಬಾರಿಗೆ ಅಳದಂಗಡಿಯಲ್ಲಿ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಹಾಗೂ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ಅ. 17 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ವಠಾರದಲ್ಲಿ ನಡೆಯಲಿದೆ.

ಆರೋಗ್ಯ ಮೇಳ ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಳದಂಗಡಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರದ ಅಧ್ಯಕ್ಷ ದೇವದಾಸ್ ಕೆ. ಸಾಲ್ಯಾನ್ ವಹಿಸಲಿದ್ದಾರೆ.

ಬೆಳಿಗ್ಗೆ 9.30 ಕ್ಕೆ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ, ಬೆಳಿಗ್ಗೆ 10 ಕ್ಕೆ ಅಳದಂಗಡಿ ಪೇಟೆಯಿಂದ ಕಾರ್ಗಿಲ್ ಯೋಧರ ಬೃಹತ್ ಮೆರವಣಿಗೆಗೆ ಡಾ. ಎನ್. ಯಂ ತುಳುಪುಳೆ ಅಳದಂಗಡಿ ರವರು ಚಾಲನೆ ನೀಡಲಿದ್ದಾರೆ.

ಬೆಳಿಗ್ಗೆ 11.00 ಕ್ಕೆ ಸಭಾಕಾರ್ಯಕ್ರಮದಲ್ಲಿ ದೇಶಕ್ಕಾಗಿ ಸೇವೆಗೈದ ಕಾರ್ಗಿಲ್ ವೀರ ಯೋಧರು ಮತ್ತು ನಿಸ್ವಾರ್ಥ ಸೇವೆಗೈಯುತ್ತಿರುವ ಸಾಮಾಜಿಕ ಕಾರ್ಯಕರ್ತರಾದ ಕ್ಯಾಪ್ಟನ್ ನವೀನ್ ನಾಗಪ್ಪ, ಶ್ರೀರಂಗಪ್ಪ ಹುಲಿಯಪ್ಪ ಆಲೂರು, ಹರೀಶ್ ರೈ.ಪಿ., ಡಾ. ರವಿ ಕಕ್ಕೆಪದವು ಜನಸ್ನೇಹಿ ಯೋಗೀಶ್ ರವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ನಡೆಯಲಿದೆ.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರದ ಗೌರವ ಅಧ್ಯಕ್ಷ ಶಿವಪ್ರಸಾದ್ ಅಜಿಲರು ವಹಿಸಲಿದ್ದಾರೆ. ಹಾಗೂ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ

Suddi Udaya

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya
error: Content is protected !!