24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ  ವನದುರ್ಗ ಕ್ಷೇತ್ರದಲ್ಲಿ ನವರಾತ್ರಿ ಉತ್ಸವವು ಬಹಳ ವಿಜೃಂಭಣೆಯಿಂದ ಅ.3ರಿಂದ ಅ.12 ರವರೆಗೆ ಜರಗಿತ್ತು.

ಅ.12 ರಂದು ಬೆಳಿಗ್ಗೆ ವಾಹನ ಪೂಜೆ, ಅಕ್ಷರಾಭ್ಯಾಸ, ಮಧ್ಯಾಹ್ನ ಮಹಾ ಪೂಜೆ, ಪ್ರಸಾದ ವಿತರಣೆ ನಡೆಯಿತು. 

 ರಾತ್ರಿ ನವದುರ್ಗ ಭಜನಾ ಮಂಡಳಿಯವರಿಂದ ಕುಣಿತ ಭಜನೆ, ಹಾಗೂ ದೇವರಿಗೆ ರಂಗಪೂಜೆ, ಮಹಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅರಿಕೆಗುಡ್ಡೆ ಶ್ರೀ  ವನದುರ್ಗ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಟಿ ಪಿಲಿಕಬೆ ರವರು ನವರಾತ್ರಿ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ವ್ಯಕ್ತಪಡಿಸಿದರು. ಅಲ್ಲದೆ ಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿರುವ ಸಭಾಭವನದ ಕೆಲಸವು ಮುಂದಿನ ಜಾತ್ರೆಯ ಒಳಗಾಗಿ ಪೂರ್ಣಗೊಳ್ಳಬೇಕಾಗಿದ್ದು ತಾವೆಲ್ಲರು ಸಹಕರಿಸಬೇಕೆಂದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಪದ್ಮಯ್ಯ ಬಾರಿಗ, ಅರಸಿನಮಕ್ಕಿ ಶ್ರೀರಂಗ ದಾಮ್ಲೆ, ಮುರುಳಿಧರ ಶೆಟ್ಟಿಗಾರ್, ಕೇಶವ ರಾವ್ ನೆಕ್ಕಿಲು, ಅರ್ಚಕರಾದ ಉಲ್ಲಾಸ್ ಭಟ್, ಶ್ರೀರಮಣ ಭಟ್ ಪಿಲಿಕ್ಕಬೆ, ಲಕ್ಷ್ಮೀ ಪಿಲಿಕ್ಕಬೆ ಹಾಗೂ ಗ್ರಾಮಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!