23.4 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

ಉಜಿರೆ: ಆರೋಗ್ಯಕರ ಜೀವನಕ್ಕೆ ಕೈಯ ಶುಚಿತ್ವವೂ ಕೂಡ ಅತಿ ಮುಖ್ಯ. ಇತ್ತೀಚಿನ ವರದಿಯ ಪ್ರಕಾರ ಕೈಯ ಅಸುರಕ್ಷತೆಯಿಂದ ಪ್ರತಿ ವರ್ಷ 3.5 ಮಿಲಿಯನ್ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಡಯೇರಿಯಾ ಹಾಗೂ ನ್ಯೂಮೆನಿಯಾದಂತಹ ಕಾಯಿಲೆಗಳು ಕೈ ತೊಳೆಯದೆ ಆಹಾರ ಸೇವಿಸುವುದರಿಂದ ಬರುತ್ತವೆ. ಈಗ ಕೊರೋನ ವೈರಸ್ ಕೂಡ ಸೇರ್ಪಡೆಯಾಗಿದೆ. ಕೈಯ ಅಸುರಕ್ಷತೆ ಬಗ್ಗೆ ಕಳವಳಗೊಂಡ ವಿಶ್ವ ಆರೋಗ್ಯ ಸಂಸ್ಥೆಯು 2008 ರಿಂದ ವಿಶ್ವ ಕೈ ತೊಳೆಯುವ ದಿನವನ್ನಾಗಿ ಘೋಷಿಸಿದೆ. ಇದೀಗ ಸುಮಾರು 70 ದೇಶಕ್ಕಿಂತಲೂ ಹೆಚ್ಚು ದೇಶಗಳಲ್ಲಿ ಕೈ ತೊಳೆಯುವ ದಿನದಂದು ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನಗಳ ಬಗ್ಗೆ ತಿಳಿಸುವ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಕೈ ತೊಳೆಯುವ ದಿನಾಚರಣೆ ಪ್ರಯುಕ್ತ ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆ ನಡೆಸಿ ಮಾತನಾಡಿದರು.

ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.
ಶ್ರೀಹರಿ ಹಾಗೂ ಗೌತಮಿ ಜಿ. ಪ್ರಾತ್ಯಕ್ಷಿಕೆಯಲ್ಲಿ ಭಾಗವಸಿದರು. ಘಟಕದ ನಾಯಕ ಆದಿತ್ಯ ವಿ. ಸ್ವಾಗತಿಸಿ , ವಂದಿಸಿದರು.

Related posts

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!