ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

ಉಜಿರೆ : ಮಾಡುವ ಕೆಲಸದಲ್ಲಿ ತೃಪ್ತಿ, ಆ ಕೆಲಸದ ಕುರಿತು ಆಳವಾದ ಅರಿವು ಹಾಗೂ ಜೀವನದಲ್ಲಿ ಶಿಸ್ತು, ಸಮಯಪ್ರಜ್ಞೆ ಇರುವುದು ಅಗತ್ಯ ಎಂದು ಹಿರಿಯ ಸಾಹಿತಿ, ನಿವೃತ್ತ ಇಂಜಿನಿಯರ್ ಕುಮಾರಸ್ವಾಮಿ ಟಿ. ಹೇಳಿದರು.

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಸರಣಿ ‘ಎಸ್ ಡಿ ಎಂ ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮದಲ್ಲಿ ಅವರು ಪ್ರತಿಭಾನ್ವಿತ ವಿದ್ಯಾರ್ಥಿ ನಿತಿನ್ ಎಸ್.ಜೆ. (ದ್ವಿತೀಯ ಬಿ.ಎ.) ಅವರಿಗೆ 5,000 ರೂ. ಸಹಾಯಧನ ಹಸ್ತಾಂತರಿಸಿ ಮಾತನಾಡಿದರು.
“ತೃಪ್ತಿ ಇದ್ದಲ್ಲಿ ನಾವು ಭ್ರಷ್ಟಾಚಾರಕ್ಕೆ ಒಳಗಾಗದೆ ಬದುಕಬಹುದು. ಏನನ್ನಾದಾರೂ ಸಾಧಿಸಬೇಕಾದರೆ ಮೊದಲು ಅಹಂಕಾರ ಬಿಡಬೇಕು. ಹಾಗಿದ್ದಾಗ ಸಾಧಿಸುವ ಅವಕಾಶಗಳು ಹೇರಳವಾಗಿ ದೊರೆಯುತ್ತವೆ. ಶಿಸ್ತು ಇತ್ಯಾದಿ ಮೌಲ್ಯಗಳಿದ್ದಾಗ ಯಶಸ್ಸು ಸಾಧ್ಯವಾಗುತ್ತದೆ” ಎಂದು ಅವರು ಕಿವಿಮಾತು ಹೇಳಿದರು.


ಸಿದ್ಧವನ ಗುರುಕುಲದಲ್ಲಿ ತಾವು ಕಳೆದ ದಿನಗಳನ್ನು ಮೆಲುಕು ಹಾಕಿದ ಅವರು, “ಸಾಮರಸ್ಯ, ಸಹಬಾಳ್ವೆಯಂತಹ ಮೌಲ್ಯಗಳನ್ನು ಸಿದ್ಧವನ ಕಲಿಸಿದೆ, ಉತ್ತಮ ಗೆಳೆಯರನ್ನು ನೀಡಿದೆ” ಎಂದರು.


ಜೀವನ ಕೇವಲ 60 ವರ್ಷಗಳವರೆಗೆ ಅಲ್ಲ. ಅದರ ಮೇಲೂ ಇದೆ. ಯೋಗಾಭ್ಯಾಸ, ಓದು ಇತ್ಯಾದಿ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡರೆ ವಿಶ್ರಾಂತ ಜೀವನದಲ್ಲಿ ಅವು ನೆರವಾಗುತ್ತವೆ ಎಂದು ಅವರು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ ಪ್ರಾಂಶುಪಾಲ ಎಸ್. ಎನ್. ಕಾಕತ್ಕರ್, “ಯಾವುದೇ ಶಿಕ್ಷಣ ಸಂಸ್ಥೆ ಬೆಳೆಯಬೇಕಾದರೆ ಉತ್ತಮ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳು ಅಗತ್ಯ. ನಮ್ಮ ಕಾಲೇಜಿನಲ್ಲಿ ಈ ಎಲ್ಲ ಅಂಶಗಳೂ ಸಾಂಸ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತಿವೆ. ಹಳೆ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ವಿತರಣೆ, ಬಿಸಿಯೂಟ ಯೋಜನೆಗೆ ಆರ್ಥಿಕ ನೆರವು ಇತ್ಯಾದಿ ಕಾರ್ಯಗಳನ್ನು ಮಾಡುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.


ಕಾರ್ಯಕ್ರಮ ಸಂಯೋಜಕ ಡಾ. ಎಂ. ಪಿ. ಶ್ರೀನಾಥ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ಗುರುರಾಜ್ ಭಟ್ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya
error: Content is protected !!