ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಪೋಕ್ಸೋ ಕಾಯಿದೆಯ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಯಾದ ವಿನಿತ್ ಲ್ಯಾನ್ಸನ್ ಸಿಕ್ವೇರಾ ಇವರು ಮಾತನಾಡಿ ಶಾಲೆಗಳಲ್ಲಿ, ಮನೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಎಳೆ ವಯಸ್ಸಿನ ಮಕ್ಕಳ ಮೇಲೆ ವಿವಿಧ ರೀತಿಯ ದೌರ್ಜನ್ಯಗಳು ಜರುಗುತ್ತಿದ್ದು ಎಳೆ ಮನಸ್ಸನ್ನು ಕರಟಿ ಹೋಗುವಂತೆ ಮಾಡುತ್ತಿದೆ. ಇವುಗಳನ್ನು ಹತ್ತಿಕ್ಕಲು ಪೋಕ್ಸೋ ಕಾಯಿದೆ ಎಂಬ ಕಾನೂನಿನ ಚೌಕಟ್ಟು ಅತೀ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಶಿಕ್ಷಕರಲ್ಲಿ, ಪೋಷಕರಲ್ಲಿ ಮತ್ತು ಸಮುದಾಯದ ಸದಸ್ಯರಲ್ಲಿ ತಮ್ಮ ಮಕ್ಕಳ ಕುರಿತಾಗಿ ಕಾಳಜಿಯನ್ನು ಮೂಡಿಸುವುದರೊಂದಿಗೆ ಮಕ್ಕಳಿಗೆ ಭದ್ರತೆ ಮತ್ತು ರಕ್ಷಣೆಯನ್ನು ಒದಗಿಸುವುದೇ ಈ ಕಾಯಿದೆಯ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು.


ಅಧ್ಯಕ್ಷೀಯ ನುಡಿಗಳನ್ನಾಡಿದ ಪ್ರಶಿಕ್ಷಣಾರ್ಥಿ ಚೈತ್ರಾ ಎಸ್ ರವರು ಕಾಯಿದೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಾಗ ಮಾತ್ರ ಸಮಾಜದಲ್ಲಿ ಶಿಸ್ತು, ರಕ್ಷಣೆ ಮತ್ತು ಭದ್ರತೆ ದೊರಕಲು ಸಾಧ್ಯವಿದೆ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ಅವರು ಶಿಕ್ಷಕರಿಗೆ ಶಾಲೆಗಳಲ್ಲಿ ವೈಯಕ್ತಿಕ ಶಿಸ್ತಿನ ಜೊತೆಗೆ ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಉತ್ತಮ ನಡೆನುಡಿಗಳು ಅವಶ್ಯಕ ಎಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವೃಂದದವರು, ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಶಂಕರಲಿಂಗ ಇವರು ಅತಿಥಿ ಪರಿಚಯಿಸಿ, ಆಧ್ಯ ಯು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ಬೆಳ್ತಂಗಡಿ ಜೆಸಿಐ ಘಟಕಕ್ಕೆ ಹಲವಾರು ಪ್ರಶಸ್ತಿ

Suddi Udaya

ಬುರುಡೆ ಪ್ರಕರಣ: ಸುಜಾತ ಭಟ್ ಗೆ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!