ಬೆಳ್ತಂಗಡಿ: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪ ಚುನಾವಣಾ ಪ್ರಯುಕ್ತ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆಯು ಅ.17 ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು.
ಚುನಾವಣಾ ಅಭ್ಯರ್ಥಿ ರಾಜು ಪೂಜಾರಿ ಮಾತನಾಡಿ, ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸವನ್ನು ಮಾಡಿದ್ದೇನೆ ಎಂದರೆ ಅದು ಜನರ ನಿರಂತರ ಸಂಪರ್ಕದಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಅವಕಾಶವು ಸಿಕ್ಕಿದಾಗ ಅದನ್ನು ಉಪಯೋಗಿಸಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯನ್ನು ತುಂಬುವಂತಹ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿದ್ದೇನೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಾಲ್ಮೀಕಿ ಜಯಂತಿ ಅಂಗವಾಗಿ ವಾಲ್ಮೀಕಿ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಹಾಗೂ ಇತ್ತೀಚಿಗೆ ಅಗಲಿದ ಪಕ್ಷದ ಕಾರ್ಯಕರ್ತರಾದ ಸುಂದರ ಗೌಡ ಉಜಿರೆ, ರೋಹಿತ್ ಲಾಯಿಲ, ಶಂಕರ್ ಹೆಗ್ಡೆ ನುಡಿನಮನವನ್ನು ಸಲ್ಲಿಸಲಾಯಿತು.
ವೇದಿಕೆಯಲ್ಲಿ ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ, ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕೆ. ಬಂಗೇರ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಜಿಲ್ಲಾ ಪಂ. ಮಾಜಿ ಉಪಾಧ್ಯಕ್ಷರುಗಳಾದ ಎಂ.ಎಸ್ ಮೊಹಮ್ಮದ್, ಧರಣೇ0ದ್ರ ಕುಮಾರ್, ಮಹಿಳಾ ಕಾಂಗ್ರೆಸ್ ನಾಯಕಿ ಲೋಕೇಶ್ವರಿ, ಪ್ರಶಾಂತ್ ವೇಗ್ನಸ್, ಸುಭಾಷ್ ಚಂದ್ರ, ಧರಣೇ0ದ್ರ ಕುಮಾರ್, ರ್ವಾಯಿ ಉಪಸ್ಥಿತರಿದ್ದರು.
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ನ ಸ್ವಾಗತಿಸಿದರು. ಸೇವಾದಳದ ಅಧ್ಯಕ್ಷ ಪ್ರದೀಪ್ ಕೆ.ಸಿ ವಂದೇ ಮಾತರಂ ಹಾಡಿದರು. ಶಾಹುಲ್ ಹಮೀದ್ ನಿರೂಪಿಸಿ, ನಗರ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ನಾಗೇಶ್ ಧನ್ಯವಾದವಿತ್ತರು.