ಬೆಳ್ತಂಗಡಿ: ಗ್ರಾಮ ಪಂಚಾಯಿತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೆ ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯವ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವಿದೆ. ಆದರೆ ಕೆಲವು ನಿಯಮಗಳು ಅನ್ವಯ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯ ಯಾವುದೇ ಒಂದು ಸ್ಥಳೀಯಾಡಳಿತ ಸಂಸ್ಥೆಯನ್ನು ಪ್ರತಿನಿಧಿಸಿದರೆ ಮಾತ್ರ ಪರಿಷತ್ ಚುನಾವಣೆಗೆ ಮತದಾನ ಅವಕಾಶ ಪಡೆಯುತ್ತಾರೆ.
ಈ ಬಾರಿ ವಿಧಾನಪರಿಷತ್ ಉಪಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರಿಗೆ ಮತದಾನದ ಅವಕಾಶವಿಲ್ಲ.
ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಬೆಳ್ತಂಗಡಿ ಗ್ರಾಮಾಂತರ ಪ್ರದೇಶದ ಮತದಾರರಾಗಿರುವ ಕಾರಣ ಬೆಳ್ತಂಗಡಿ ಪಟ್ಟಣ ಪಂಚಾಯಿತಿಯನ್ನು ಪ್ರತಿನಿಧಿಸುತ್ತಿಲ್ಲ. ಹಾಗಾಗಿ ಇವರ ಹೆಸರು ಸ್ಥಳೀಯಾಡಳಿತ ಸಂಸ್ಥೆಗಳ ಮತದಾರರ ಪಟ್ಟಿಯಲ್ಲಿ ಇಲ್ಲ.