ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

Updated on:

ಬೆಳ್ತಂಗಡಿ : ಚಿಕ್ಕಮಗಳೂರಿನ ಕೊಟ್ಟಿಗೆರೆಯಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವುವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಗುರುವಾಯನಕೆರೆ ಹಾಗೂ ವಿಟ್ಲ ತಾಲೂಕಿನ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ರಕ್ಷಣೆ ಮಾಡಲಾಗಿದ್ದು ಈ ಘಟನೆಯು ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಅ.18 ರಂದು ನಡೆದಿದೆ.

ವಶಕ್ಕೆ ಪಡೆದಿರುವ ಹೋರಿ ಹಾಗೂ ಗೋವು ಗಳನ್ನು ಸಾಲೆತ್ತೂರಿನ ಅನ್ಯಕೋಮಿನ ವ್ಯಕ್ತಿಯೊಬ್ಬರಿಗೆ ಸೇರಿರುವುದಾಗಿದೆ.

ಕರ್ನಾಟಕದ ಬೇರೆ ಬೇರೆ ಪ್ರದೇಶದಿಂದ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವ ಒಂದು ಮಾಫಿಯಾ ಸಾಲೆತ್ತೂರಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹಿಂದು ಕಾರ್ಯಕರ್ತರು ತಿಳಿಸಿದ್ದಾರೆ . ಕೇರಳದ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುವುದು ನಿತ್ಯ ನಿರಂತರವಾಗಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದರು.

ಅಕ್ರಮ ಗೋ ಸಾಗಾಟದಲ್ಲಿ ವಶಕ್ಕೆ ಪಡೆದಿರುವ ವಾಹನದ ನೋಂದಣಿ ಸಂಖ್ಯೆ KA-16- D-6960 ಹಾಗೂ ಆರೋಪಿಗಳಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಬಿನ್ನಡಿ ಗ್ರಾಮದ ಅಶ್ವಥ್ ಮತ್ತು ಬಿನ್ನಡಿ ಗ್ರಾಮದ ಸಚಿನ್ ಬಂಧಿತ ಆರೋಪಿಗಳು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

error: Content is protected !!