25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ಕೊಕ್ಕಡ : ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ ಶ್ರೀ ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 28ನೇ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಅ. 17 ರಂದು ಶ್ರೀರಾಮ ಸೇವಾ ಮಂದಿರ ಕೊಕ್ಕಡದಲ್ಲಿ ನಡೆಯಿತು.

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕೊಕ್ಕಡ ಅಧ್ಯಕ್ಷ ಕೆ ಕೃಷ್ಣ ಭಟ್ ರವರು ಕೊಕ್ಕಡದ ಗ್ರಾಮೀಣ ಜನರಿಗೆ ಸ್ವ ಉದ್ಯೋಗ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟರುವುದು ಬಹಳ ಸಂತೋಷದ ವಿಷಯ ಹಾಗೂ ಸೇವಾಭಾರತಿ ಸಂಸ್ಥೆಯು ನಡೆಸುವ ಸೇವೆಗಳ ಬಗ್ಗೆ ಶ್ಲಾಘಿಸಿ ಇನ್ನಷ್ಟು ಸೇವೆಯನ್ನು ಮಾಡುವ ಯಶಸ್ಸು ನಿಮ್ಮದಾಗಲಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ಸಿಇಒ ಸ್ವರ್ಣಗೌರಿ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ.
ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರು ಯಾರಿಗೂ ಅವಲಂಬಿತವಾಗದೆ ಸ್ವಾವಲಂಬಿ ಜೀವನವನ್ನು ನಡೆಸುವುದು ಅತ್ಯಗತ್ಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಗೀತಾ ತರಬೇತಿಯಲ್ಲಿ ತಿಳಿಸಿಕೊಟ್ಟ ಹೊಲಿಗೆಯ ವಿಧಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿ, ತಮಗೆ ಶಿಬಿರಾರ್ಥಿಗಳಿಂದ ಕಲಿಯುವ ಸಂದರ್ಭದಲ್ಲಿ ಉತ್ತಮ ಪ್ರತಿಕ್ರಿಯೆ ದೊರಕುತ್ತಿತ್ತು ಎಂದು ಸಂತಸ ವ್ಯಕ್ತಪಡಿಸಿದರು.

ಶ್ರೀ ದುರ್ಗಾ ಮಾತೃ ಮಂಡಳಿಯಿಂದ ಹಾಗೂ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಕೊಕ್ಕಡ ಇವರುಗಳು ಸೇವಭಾರತಿ ಸಂಸ್ಥೆಗೆ 2 ಟೈಲರಿಂಗ್ ಮಿಶಿನ್ ಅನ್ನು ನೀಡಿ ಮಹಿಳೆಯರ ಸ್ವ ಉದ್ಯೋಗಕ್ಕೆ ದಾರಿದೀಪವಾಗಿದ್ದಾರೆ.

ಸಂಸ್ಥೆಯ ಪರವಾಗಿ ಶ್ರೀಮತಿ ಗೀತಾ ಹಾಗೂ 1 ತಿಂಗಳುಗಳ ಕಾಲ ನಮಗೆ ಶಿಬಿರವನ್ನು ನಡೆಸಲು ಸಂಪೂರ್ಣ ಸಹಕಾರವನ್ನು ನೀಡಿದ ಪುರುಷೋತ್ತಮ ಇವರಿಬ್ಬರಿಗೂ ಸನ್ಮಾನಿಸಿ ಗೌರವಿಸಲಾಯಿತು. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ , ಮಂಗಳೂರು ನಿರ್ದೇಶಕರು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಕೊಕ್ಕಡ ಅಧ್ಯಕ್ಷರಾದ ಕುಶಾಲಪ್ಪ ಗೌಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಕ್ಕಡ ಉಪಾಧ್ಯಕ್ಷರಾದ ಈಶ್ವರ್ ಭಟ್ ಹಿತ್ತಿಲು, ಶ್ರೀರಾಮ ಸೇವಾ ಟ್ರಸ್ಟ್(ರಿ .),ಕೊಕ್ಕಡ ಅಧ್ಯಕ್ಷರು ಹಾಗೂ ಸೇವಾಭಾರತಿ(ರಿ.), ಕನ್ಯಾಡಿ ಕಾರ್ಯದರ್ಶಿ ಬಾಲಕೃಷ್ಣ, ಶ್ರೀ ದುರ್ಗಾ ಮಾತೃ ಮಂಡಳಿಯ ಖಜಾಂಚಿ ಶ್ರೀಮತಿ ಬಬಿತಾ, ಶ್ರೀ ದುರ್ಗಾ ಮಾತೃ ಮಂಡಳಿಯ ಸದಸ್ಯರಾದ ಶ್ರೀಮತಿ ಸುಮತಿ ಟೈಲರಿಂಗ್ ತರಬೇತುದಾರರಾದ ಗೀತಾ ಕೊಕ್ಕಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೇವಾಭಾರತಿ ಕನ್ಯಾಡಿಯ ಅಕೌಂಟೆಂಟ್ ಅಕ್ಷತಾ ಸ್ವಾಗತಿಸಿ, ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ಶ್ರೀರಾಮ ಸೇವಾ ಟ್ರಸ್ಟ್(ರಿ.), ಸದಸ್ಯೆ ಪ್ರಮೀಳಾ ಧನ್ಯವಾದವಿತ್ತರು.
ಒಟ್ಟು 63 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ

Suddi Udaya

ಆ.14 ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಅರ್ಹ ವಿದ್ಯಾರ್ಥಿಗಳಿಗೆ ರೂ.20 ಲಕ್ಷ ಸ್ಕಾಲರ್ ಸಿಪ್ ಹಸ್ತಾಂತರ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya
error: Content is protected !!