April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

ಪೆರಾಡಿ ಬದ್ರಿಯಾ ಜುಮ್ಮಾ ಮಸೀದಿಗೊಳಪಟ್ಟ ಜಮಾಅತ್ ನ ನೂತನ ಖಾಝಿಯಾಗಿ ಜಿಲ್ಲಾ ಖಾಝಿಯಾಗಿರುವ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರು ಅ. 18ರಂದು ಜುಮ್ಮಾ ನಮಾಝ್ ಬಳಿಕ ಮಸೀದಿಯಲ್ಲಿ ನಡೆದ ಖಾಝಿ ಸ್ವೀಕಾರ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.


ಸಾಲ್ಮರ ಸಯ್ಯಿದ್ ಶರಫುದ್ದೀನ್ ತಂಙಳ್ ಅವರು ತ್ವಾಖಾ ಉಸ್ತಾದ್ ಅವರಿಗೆ ಖಾಝಿ ಪಟ್ಟ ನೀಡಿದರು.

ಮಸೀದಿ ಕಮಿಟಿ ಅಧ್ಯಕ್ಷ ಸಲಾಮ್ ಮರೋಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಯ್ಯಿದ್ ಅಕ್ರಮ್ ಅಲೀ ತಂಙಳ್ ಅಂಗರಕರ್ಯ, ಸಮದ್ ಹಾಜಿ,ಅದ್ದು ಹಾಜಿ, ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷ ಫಕೀರಬ್ಬ ಮಾಸ್ಟರ್, ಜಲೀಲ್ ಪಿ.ಎ,ಅಝೀಝ್ ಫೈಝಿ ನಂದಾವರ, ಶಾಹುಲ್ ತಂಙಳ್, ರಶೀದ್ ಹಾಜಿ,ಸುಲೈಮಾನ್ ಸ ಅದಿ ಹೊಸ್ಮಾರ್,ಡಿ.ಎ.ಉಸ್ಮಾನ್ ಹಾಜಿ ಏರ್ ಇಂಡಿಯಾ, ಹಾಸ್ಕೊ ಅಬ್ದುಲ್ ರಹ್ಮಾನ್ ಹಾಜಿ,ಪೆರಾಡಿ ಸೊಸೈಟಿ ಬ್ಯಾಂಕ್ ಪ್ರಬಂಧಕ ಶೇಖ್ ಲತೀಫ್, ಅಖೀಝ್ ಮಾಲಿಕ್,ವಾಲ್ಪಾಡಿ ಮಸೀದಿಯ ಖತೀಬರಾದ ಅಬ್ಬಾಸ್ ಫೈಝಿ ದಿಡುಪೆ,ವಾಲ್ಪಾಡಿ ಮಸೀದಿ ಕಮಿಟಿ ಅಧ್ಯಕ್ಷ ಶರೀಫ್ ಎಂ.ಎಂ, ಅಶ್ರಫ್ ಮರೋಡಿ, ಎಂ.ಜಿ.ಮುಹಮ್ಮದ್ ತೋಡಾರ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ವಕ್ಫ್ ಸಮಿತಿಯ ಉಪಾಧ್ಯಕ್ಷ ಫಕೀರಬ್ಬ ಮಾಸ್ಟರ್, ಶೇಖ್ ಲತೀಫ್ ಹಾಗೂ ಅಝೀಝ್ ಬಿ.ಸಿ.ರೋಡ್ ಅವರನ್ನು ಸನ್ಮಾನಿಸಲಾಯಿತು.
ಮಸೀದಿಯ ಖತೀಬರಾದ ಸಫ್ವಾನ್ ಬಾಖವಿ ಮಾಪಾಲ್ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮುಅಝ್ಝಿನ್ ಅಬ್ದುರ್ರಹ್ಮಾನ್ ಫೈಝಿ ವಂದಿಸಿದರು. ‌ಸಲಾಮ್ ಮರೋಡಿ ಖಾಝಿ ಅವರನ್ನು ಪರಿಚಯಿಸಿದರು. ಹಮೀದ್ ಸಾವ್ಯ ಸೇರಿದಂತೆ ಮಸೀದಿ ಕಮಿಟಿಯ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!