ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯ ಮತದಾನ ಅ.21ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅ.21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ತಾಲೂಕಿನ ಒಟ್ಟು 49 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಹಿಶೀಲ್ದಾರ್ ಪೃಥ್ವಿ ಸಾನಿಕಮ್ ಆದೇಶಿಸಿದ್ದಾರೆ.

ಅವರು ಅ. 20ರಂದು ತಾಲೂಕು ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮತಗಟ್ಟೆ ವ್ಯಾಪ್ತಿಯಲ್ಲಿ ಜನರು ಹೆಚ್ಚು ಜನರು ಗುಂಪು ಸೇರುವುದು, ಯಾವುದೇ ರಾಜಕೀಯ ಚಟುವಟಿಕೆ ಮಾಡುವುದು.ಮತ ಕಟ್ಟೆ ಪ್ರದೇಶದಲ್ಲಿ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸುವಂತಿಲ್ಲ ಎಂದರು.

48 ಗ್ರಾಮ ಪಂಚಾಯತ್ ಮತ್ತು ಒಂದು ಪಟ್ಟಣ ಪಂಚಾಯತ್ ಸೇರಿದಂತೆ ಒಟ್ಟು 49 ಮತಗಟ್ಟೆಗಳಿವೆ.ಒಂದು ಮತಗಟ್ಟೆಯಲ್ಲಿ ಮೂವರು ಸಿಬ್ಬಂದಿಗಳು ಹಾಗೂ ಒಂದು ಪಿಸಿಯವರನ್ನು ನಿಯೋಜನೆ ಮಾಡಲಾಗುತ್ತದೆ.‌ಸೂಕ್ಷ್ಮ ಪ್ರದೇಶಕ್ಕೆ ಹೆಚ್ಚುವರಿ ಪೋಲೀಸರನ್ನು ನೇಮಿಸಲಾಗುತ್ತದೆ.ತಾಲೂಕಿನಲ್ಲಿ 325 ಪುರುಷ,351 ಮಹಿಳಾ, ಒಟ್ಟು 676 ಮತದಾರರಿದ್ದಾರೆ.ಮತದಾನ ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ನಡೆಯಲಿದೆ. ಚುನಾವಣಾ ಸಂದರ್ಭದಲ್ಲಿ ಪೋಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯದಲ್ಲಿರುತ್ತಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಉಪಸ್ಥಿತರಿದ್ದರು.

Leave a Comment

error: Content is protected !!