24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

ವೇಣೂರು: ನಿಟ್ಟಡೆ ಕುಂಭಶ್ರೀ ವಸತಿ ಶಾಲೆ ಮತ್ತು ಪದವಿಪೂರ್ವ ಕಾಲೇಜು ಗುರುಕುಲ ಮಾದರಿ ಶಿಕ್ಷಣಕ್ಕೆ 2024- 25 ರ ಬೆಳ್ತಂಗಡಿ ತಾಲೂಕಿನ ಉತ್ತಮ ಶಾಲೆ ಶಿಕ್ಷಣ ಬೀಷ್ಮಪ್ರಶಸ್ತಿ ಲಭಿಸಿದೆ.


ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಗುರುಕುಲ ಮಾದರಿ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಲಾಗುತ್ತಿದ್ದು, 1996 ರಲ್ಲಿ ಪ್ರಾರಂಭಗೊಂಡ ಕುಂಭಶ್ರೀ ವಸತಿ ಶಾಲೆಯಲ್ಲಿ ಅನುಭವಿ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕುಂಭಶ್ರೀ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಸಾಧನೆಗೆ ರಾಷ್ಟ್ರೀಯ ವಿದ್ಯಾ ಗೌರವ್ ಚಿನ್ನದ ಪದಕ ಪ್ರಶಸ್ತಿ, ಪ್ರಬುದ್ಧ ಭಾರತ, ಸ್ಟಾರ್ ಆಫ್ ಏಷ್ಯಾ ಪ್ರಶಸ್ತಿಗಳು ಲಭಿಸಿವೆ. ಇದೀಗ ಕುಂಭಶ್ರೀ ವಿದ್ಯಾ ಸಂಸ್ಥೆ ಇಡೀ ಕರ್ನಾಟಕ ರಾಜ್ಯದಲ್ಲಿ ಬೆಳ್ತಂಗಡಿ ತಾಲೂಕಿನ ಅತ್ಯುತ್ತಮ ಶಾಲೆ ಎಂದು ಗುರುತಿಸಲ್ಪಟ್ಟು ಶಿಕ್ಷಣಭೀಷ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ. ಹೆಚ್ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಂದ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಕುಂಭಶ್ರೀ ವಿದ್ಯಾ ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು ,ಎಸ್ ಎಸ್ ಎಲ್ ಸಿ ಯಲ್ಲಿ ಸತತ 11ನೇ ಬಾರಿ ಶೇ.100 ಫಲಿತಾಂಶ, ಪಿಯುಸಿಯಲ್ಲಿ ಮೂರನೇ ಬಾರಿ ನೂರು ಶೇಕಡ ಫಲಿತಾಂಶವನ್ನು ಪಡೆದುಕೊಂಡಿರುತ್ತದೆ .ಬರೀ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ ಕಂಪ್ಯೂಟರ್, ಭರತನಾಟ್ಯ ,ಯೋಗ, ಸಂಗೀತ ಕರಾಟೆ ,ಯಕ್ಷಗಾನ ಮುಂತಾದ ಚಟುವಟಿಕೆಗಳಿಗೆ ಪ್ರೋತ್ಸಾಹವನ್ನು ನೀಡುತ್ತಿದ್ದು, ಉತ್ತಮ ತರಬೇತಿದಾರರಿಂದ ತರಬೇತಿಯನ್ನು ನೀಡಲಾಗುತ್ತಿದೆ .ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲಾ ವಾಹನದ ವ್ಯವಸ್ಥೆ ಮತ್ತು ಮೂರನೇ ತರಗತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ವಸತಿ ನಿಲಯದ ವ್ಯವಸ್ಥೆ ಇದೆ. ಬೇರೆ ಬೇರೆ ಜಿಲ್ಲೆ, ರಾಜ್ಯಗಳ ಮಕ್ಕಳು ಇಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಉತ್ತಮ ಪಿಯು ಕಾಲೇಜಿನ ವ್ಯವಸ್ಥೆಯಿದ್ದು, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಪಿಯುಸಿ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಜೆ ಇ ಇ ವಿಶೇಷ ತರಬೇತಿಗಳನ್ನು ನೀಡಲಾಗುತ್ತಿದೆ. ಮಾತಾ ಪಿತಾ ಗುರುದೇವೋಭವ ಎಂಬ ಪೂಜ್ಯನೀಯ ಕಾರ್ಯಕ್ರಮವು ದ್ವಿತೀಯ ಪಿಯುಸಿ ಮತ್ತು ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವು ಪ್ರತಿ ವರ್ಷ ನಡೆಯುತ್ತದೆ. ಇಂತಹ ಸಾಧನೆಗೆ ಕುಂಭಶ್ರೀ ವಿದ್ಯಾಸಂಸ್ಥೆಯನ್ನು ಗುರುತಿಸಿ ರಾಜ್ಯ ಪ್ರಶಸ್ತಿ ಪಡೆದು ಕೊಂಡಿರುವುದು ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ. ಹೆಚ್ ಹಾಗೂ ಸಂಚಾಲಕರಾದ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ ವೃಂದ ಮತ್ತು ಶಿಕ್ಷಕ, ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳಿಗೆ ಹೆಮ್ಮೆಯ ವಿಷಯ.

Related posts

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya
error: Content is protected !!