September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

ಬೆಳ್ತಂಗಡಿ: ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಬಡ ಮಕ್ಕಳ ಆರೋಗ್ಯ ,ನೈರ್ಮಲ್ಯ , ಮತ್ತು ಹಕ್ಕು ಸಂರಕ್ಷಣೆಯ ಹಿತದೃಷ್ಟಿಯಿಂದ ದಕ್ಷಿಣಕನ್ನಡ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸರಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಶೌಚಾಲಯಗಳನ್ನು ಸ್ವಯಂ ಪ್ರೇರಿತ ಶ್ರಮದಾನದ ಮೂಲಕ ಶುಚಿತ್ವ ಮತ್ತು ದುರಸ್ತಿಗೊಳಿಸಿ ನವೀಕರಿಸಿ ಸ್ವಚ್ಛಾಲಯಗಳನ್ನಾಗಿ ಪರಿವರ್ತಿಸುವ ವಿನೂತನ ಪರಿಕಲ್ಪನೆಯೊಂದಿಗೆ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಚಾಲಯ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.


ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸರಿಸುಮಾರು 1000ಕ್ಕೂ ಹೆಚ್ಚಿನ ಎಲ್ಲಾ ಸರಕಾರಿ ಪ್ರಾಥಮಿಕ ಶಾಲೆಗಳ ಶೌಚಾಲಯಗಳನ್ನು “ಸ್ವಚ್ಛಾಲಯ”ಗಳನ್ನಾಗಿ ಪರಿವರ್ತಿಸುವ ಮೂಲಕ ಬಡಮಕ್ಕಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ನೆರವಾಗುವುದು ಈ ಅಭಿಯಾನದ ಸದುದ್ದೇಶ. ದಸರಾ ರಜಾದಿನಗಳಲ್ಲಿ ಈಗಾಗಲೇ ಹೊಯ್ಗೆಬಜಾರ್, ಸೂಟರ್ ಪೇಟೆ ಮತ್ತು ಕಾವೂರು ಪ್ರಾಥಮಿಕ ಶಾಲೆಗಳಲ್ಲಿ ಶೌಚಾಲಯಗಳನ್ನು ಸ್ವಚ್ಛಾಲಯಗಳನ್ನಾಗಿ ರಾಜಕೇಸರಿ ಸಂಸ್ಥೆಯ ವತಿಯಿಂದ ಪರಿವರ್ತಿಸಲಾಗಿದೆ.


ಶಾಲೆಗಳಲ್ಲಿ ಅ.21 ರಂದು ಪರಿವರ್ತಿತ ಸ್ವಚ್ಚಾಲಯಗಳ ಉದ್ಘಾಟನಾ ಸಮಾರಂಭವನ್ನು ಆಯಾಯ ಶಾಲೆಗಳಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು. ಮೂರೂ ಶಾಲೆಯ ಕಾರ್ಯಕ್ರಮಗಳು ರಾಜಕೇಸರಿ ಸಂಸ್ಥೆಯ ಸಂಸ್ಥಾಪಕಧ್ಯಕ್ಷ ದೀಪಕ್ ಜಿ ಬೆಳ್ತಂಗಡಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮೂರೂ ಶಾಲೆಗಳಲ್ಲಿ ಪುಟಾಣಿ ಮಕ್ಕಳಿಂದಲೇ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಲಾಯಿತು.


ರಾಜಕೇಸರಿ ಟ್ರಸ್ಟ್ ನ ಜಿಲ್ಲಾಧ್ಯಕ್ಷರಾದ ಸಂತೋಷ್ ಕೊಲ್ಯ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಚ್ಛಾಲಯ ಅಭಿಯಾನದ ಸದುದ್ದೇಶ ಮತ್ತು ಕಾರ್ಯಯೋಜನೆಯ ಬಗ್ಗೆ ಮಾಹಿತಿ ನೀಡಿದರು.
ದ.ಕ.ಜಿ.ಪಂ.ಮಾ.ಹಿ.ಪ್ರಾಥಮಿಕ ಶಾಲೆ ಕಾವೂರು ಇದರ ನವೀಕೃತ ಸ್ವಚ್ಛಾಲಯವನ್ನು ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸನ್ಮಾನ್ಯ ಜೇಮ್ಸ್ ಕುಟಿನೊರವರು ಉದ್ಘಾಟಿಸಿ ಇಲ್ಲಿಯವರೆಗೆ ಯಾರೂ ಗಮನಹರಿಸದ ಉತ್ತಮ ಕಾರ್ಯಕ್ಕೆ ರಾಜ ಕೇಸರಿ ಟ್ರಸ್ಟ್ ಮುಂದಾಗಿರುವುದು ಶ್ಲಾಘನೀಯ ಮತ್ತು ಅಭಿಯಾನದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಸಂತಸ ವ್ಯಕ್ತ ಪಡಿಸಿದರು.


ಹೊಯ್ಗೆಬಜಾರ್ ಜ್ಞಾನೋದಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಂಗಳೂರು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಜಯರಾಜ್ ಪ್ರಕಾಶ್ ರವರು ಅಭಿಯಾನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ಇಂತಹ ಸಮಾಜಮುಖಿ ಅಭಿಯಾನಗಳು ಇತರರಿಗೂ ಪ್ರೇರಣೆಯಾಗಲಿ ಎಂದು ಹಾರೈಸಿ ಈ ಸತ್ಕಾರ್ಯದಲ್ಲಿ ರಾಜ ಕೇಸರಿಯೊಂದಿಗೆ ಕೈ ಜೋಡಿಸುವುದಾಗಿ ತಿಳಿಸಿದರು.


ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆಯವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಸರಕಾರಿ ಶಾಲೆಗಳ ಉಳಿವಿಗಾಗಿ ನಾವೆಲ್ಲರೂ ಶ್ರಮಿಸಬೇಕು ಮತ್ತು ಶಾಲೆಗಳಲ್ಲಿ ಉತ್ತಮ ವ್ಯವಸ್ಥೆಗಳನ್ನು ಕಲ್ಪಿಸುವಲ್ಲಿ ಇಂತಹ ಸಮಾಜಮುಖಿ ಚಿಂತನೆಯ ಅಭಿಯಾನಗಳು ದೊಡ್ಡ ಮಟ್ಟದಲ್ಲಿ ಸಹಕಾರಿಯಾಗಲಿದೆ ಎಂದರು.


ಸೂಟರ್ ಪೇಟೆಯ ದ.ಕ.ಜಿ.ಪಂ.ಕಿ.ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಶ್ರೀಮತಿ ಪಲ್ಲವಿ ಮತ್ತು ಶ್ರೀಮತಿ ಅನಿತರವರು ಬಡ ಮಕ್ಕಳ ಆರೋಗ್ಯದ ಹಿತದಷ್ಟಿಯಿಂದ ಶೌಚಾಲಯಗಳ ಶುಚಿತ್ವ ಮತ್ತು ದುರಸ್ತಿ ಕಡೆಗೆ ಗಮನ ಹರಿಸಿ ಯೋಜನೆ ರೂಪಿಸಿದ್ದು ಸಂಸ್ಥೆಯ ನಿಸ್ವಾರ್ಥ ಸೇವಾ ಮನೋಭಾವನೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಣ್ಣಿಸಿದರು.


ಸ್ವಚ್ಚತಾ ಶ್ರಮದಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಶ್ರಮ ವಹಿಸಿದ ಸಂಸ್ಥೆಯ ಉಪಾಧ್ಯಕ್ಷ ಲಕ್ಷ್ಮಣ್ ಕೋಟ್ಯಾನ್ ಹಾಗೂ ಶ್ರೀಮತಿ ಸುಜಾತ ಕೋಟ್ಯಾನ್ ದಂಪತಿಯನ್ನು ಮತ್ತು ಜೊತೆ ಕಾರ್ಯದರ್ಶಿ ಶ್ರೀನಿವಾಸ್ ಕುಲಾಲ್ ರವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.


ಮೂರೂ ಶಾಲೆಗಳ ಮುಖ್ಯೋಪಾಧ್ಯಾಯಿನಿಯರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಸ್ವಚ್ಚತಾ ಶ್ರಮದಾನದಲ್ಲಿ ಪಾಲ್ಗೊಂಡ ಶ್ರಮಜೀವಿ ಸ್ವಯಂ ಸೇವಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ ಕೇಸರಿ ಟ್ರಸ್ಟ್ ನ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು, ಶಾಲೆಯ ಹಳೇ ವಿದ್ಯಾರ್ಥಿ ಸಂಘ ಮತ್ತು ಶಿಕ್ಷಕ ಪೋಷಕರ ಸಂಘದ ಪದಾಧಿಕಾರಿಗಳು, ಸದಸ್ಯರು, ಶಿಕ್ಷಕ ವೃಂದದವರು ಮತ್ತು ಶಾಲೆಯ ಮಕ್ಕಳು ಉಪಸ್ಥಿತರಿದ್ದರು.


ಕುಮಾರಿ ಮಧುರ ಪೂಜಾರಿ ವಾಮಂಜೂರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!