30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

ಶಿಶಿಲ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ, ಶಿಶಿಲ ಮತ್ತು ಗ್ರಾಮ ಪಂಚಾಯತ್ ಶಿಶಿಲ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರವು ಶಿಶಿಲ ವೈಕುಂಠಪುರ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ಕಟ್ಟಡದಲ್ಲಿ ಅ.22 ರಂದು ಉದ್ಘಾಟನೆಗೊಂಡಿತು.

ಶಿಶಿಲ ಟೈಲರಿಂಗ್‌ ತರಬೇತುದಾರರಾದ ಶ್ರೀಮತಿ ವಿನಯ ಶೆಂಡ್ಯ, ಬಂಡಿಹೊಳೆ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸೇವಾ ಭಾರತಿ ಕನ್ಯಾಡಿ ಇದರ ಟ್ರಸ್ಟಿ ಕೃಷ್ಣಪ್ಪ ಗುಡಿಗಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ಶಿಶಿಲ ವೈಕುಂಠಪುರ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಅಧ್ಯಕ್ಷ ಹರೀಶ್ ಕೊಳಂಬೆ ಆಗಮಿಸಿದ್ದರು.

ಅಂಗನವಾಡಿ ಕಾರ್ಯಕರ್ತೆ ಯಶೋಧ ಸ್ವಾಗತಿಸಿದರು. ಸೇವಾ ಭಾರತಿಯ ಸುಮಾ ಕಾರ್ಯಕ್ರಮ ನಿರೂಪಿಸಿ, ಚಂದನ್ ಗುಡಿಗಾರ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಸೋಣಂದೂರು: ಬಲ್ಪುಂಜ ನಿವಾಸಿ ದಾಮೋದರ್ ಸಾಲಿಯಾನ್ ನಿಧನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!