April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ಎಲ್ಲಾ ಸದಸ್ಯರೂ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಸಂಘಟನಾತ್ಮಕ ಸಾಧನೆಯನ್ನು ನಡೆಸಿದ ಇಡೀ ತಂಡಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಅಭಿನಂದನೆ ಸಲ್ಲಿಸಿದರು.

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಂಡಲ ಯುವಮೋರ್ಚಾ ತಂಡದ ಪ್ರತಿಯೊಬ್ಬರೂ 100 ಕಿಂತ ಜಾಸ್ತಿ ಜನರನ್ನು ಬಿಜೆಪಿ ಸದಸ್ಯತ್ವ ಮಾಡಿಸಿದ್ದಾರೆ. ಹಾಗೂ ವಿಶೇಷವಾಗಿ ಕಾರ್ಯದರ್ಶಿ ಗಿರೀಶ್ ಗೌಡ ಬಿ ಕೆ ಬಂದಾರು 500 ಕಿಂತ ಮೇಲ್ಪಟ್ಟು, ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು ಹಾಗೂ ವಿನೀತ್ ಕೋಟ್ಯಾನ್ ಸಾವ್ಯ ಇವರು 250 ಕಿಂತ ಮೇಲ್ಪಟ್ಟು ಸದಸ್ಯತ್ವ ಮಾಡಿರುತ್ತಾರೆ.


ರಾಜ್ಯದಲ್ಲಿ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವಿಶೇಷ ರೀತಿಯಲ್ಲಿ ಸದಸ್ಯತ್ವ ಅಭಿಯಾನದಲ್ಲಿ ಮಾದರಿಯಾಗಿರುತ್ತದೆ.

Related posts

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya
error: Content is protected !!