25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

ಮಲವಂತಿಗೆ: ಇಲ್ಲಿಯ ಮಲ್ಲ, ನಂದಿಕಾಡು, ಆರ್ನಂದಿಕಾಡು ಪರಿಸರದಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದಲ್ಲಿ ಕೃಷಿಯನ್ನು ನಾಶಪಡಿಸಿದೆ. ಸದಾಶಿವ ಮಲೆಕುಡಿಯ ತೋಟದಲ್ಲಿ ಸುಮಾರು ೧೫೦ ಅಡಿಕೆ ಮರ, ತೆಂಗಿನ ಮರಗಳು ಹಾಗೂ ಇತರ ಮರಗಳನ್ನೂ ನೆಲಕ್ಕೆ ಉರುಳಿಸಿದೆ. ಇವರಿಗೆ ಸೇರಿದ ಒಂದುವರೆ ಎಕ್ರೆ ಗದ್ದೆಯಲ್ಲಿನ ಭತ್ತದ ಕೃಷಿಯನ್ನು ಸಂಪೂರ್ಣ ನಾಶಪಡಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮನೆಗಳ ಸಮೀಪದಲ್ಲಯೇ ಕಾಡಾನೆಗಳು ಓಡಾಟ ನಡೆಸಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಆರಕ್ಕೂ ಹೆಚ್ಚು ಆನೆಗಳು ತಂಡದಲ್ಲಿದ್ದು, ಇದೇ ಪರಿಸರದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ ಆರಕ್ಕೂ ಹೆಚ್ಚು ಆನೆಗಳಿದ್ದ ಹಿಂಡೊಂದು ಚಾರ್ಮಾಡಿಯಲ್ಲಿ ಕೃಷಿಗೆ ಹಾನಿಯುಂಟು ಮಾಡಿತ್ತು ಇದೇ ಆನೆಗಳು ಇದೀಗ ಮಲವಂತಿಗೆ ಪ್ರದೇಶಕ್ಕೆ ಬಂದಿರಬಹುದು ಎಂದು ಅನುಮಾನಿಸಲಾಗಿದೆ.

Related posts

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya
error: Content is protected !!