September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಉಜಿರೆ: ಬದುಕು ಉತ್ತಮವಾಗಿ ರೂಪುಗೊಳ್ಳಲು ಆತ್ಮವಿಶ್ವಾಸದ ಜೊತೆಗೆ ಶಿಸ್ತು ಇರಬೇಕು. ಶಿಸ್ತು ಶಿಕ್ಷಣದ ಅವಿಭಾಜ್ಯ ಅಂಗ ಎಂದು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಬಿ. ಸೋಮಶೇಖರ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.


ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ. 21ರಂದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


“ಬದುಕನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದನ್ನು ನಾವೇ ನಿರ್ಧರಿಸಬೇಕು. ಬದುಕು ನಮಗೆ ಹೆತ್ತವರು ನೀಡಿದ ಕೊಡುಗೆ. ಬದುಕು ಸಾರ್ಥಕವಾಗಬೇಕಾದರೆ ನಾವು ಏನನ್ನಾದರೂ ಸಾಧಿಸಬೇಕು. ಬದುಕು ಸಾರ್ಥಕವಾಗಬೇಕಾದರೆ ನಿರ್ದಿಷ್ಟ ಗುರಿ ಇರಬೇಕು. ಗುರಿ ತಲುಪಲು ಅಚಲವಾದ ಆತ್ಮವಿಶ್ವಾಸ ಅತೀ ಅಗತ್ಯ” ಎಂದು ಅವರು ಹೇಳಿದರು.

“ಉತ್ತಮ ಆರೋಗ್ಯಕ್ಕಾಗಿ ದುಶ್ಚಟಗಳಿಂದ ದೂರವಿರಬೇಕು. ದುಶ್ಚಟಗಳಿಂದ ದೂರ ಇರಲು ಉತ್ತಮ ಗೆಳೆಯರ ಬಳಗ ಇಟ್ಟುಕೊಳ್ಳಿ, ಸೋತಾಗ ಕುಗ್ಗದಿರಿ, ಗೆದ್ದಾಗ ಹಿಗ್ಗದಿರಿ, ತಿಳಿಯಾದ ನೀರಿನಂತೆ ಇರಬೇಕು. ಸಾಧ್ಯವಾದಷ್ಟು ಓದುವ ಹವ್ಯಾಸ ಬೆಳೆಸಿಕೊಂಡು ದೇಶದ ಸತ್ಪ್ರಜೆಗಳಾಗಿ ಬಾಳಿ” ಎಂದು ಅವರು ಹಾರೈಸಿದರು.


ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಶಿಸ್ತು, ಸ್ವಚ್ಛತೆ ಪಾಲನೆ ಮಾಡುವ ಕುರಿತು ಹಾಗೂ ದುಶ್ಚಟಗಳಿಂದ ದೂರ ಇರುವುದಾಗಿ ದೇವರ ಮೇಲೆ ಪ್ರಮಾಣ ವಚನ ಬೋಧಿಸಲಾಯಿತು.
ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು

Related posts

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
error: Content is protected !!