April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಬಜಿರೆ, ನಿಟ್ಟಡೆ, ಪಡ್ಡಂದಡ್ಕ. ಬಜಿರೆ, ನಿಟ್ಟಡೆ, ಪಡ್ಡಂದಡ್ಕ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ 2024-25ನೇ ಸಾಲಿನ ಕ್ರೀಡಾಕೂಟದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ, ಇದರ ವಿದ್ಯಾರ್ಥಿಗಳು ಪ್ರಾಥಮಿಕ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ಮೋಕ್ಷಿತ್ 100ಮೀಟರ್, ಮತ್ತು 200ಮೀಟರ್ ಓಟ, 400 ಮೀಟರ್ ರಿಲೇ, ಮತ್ತು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ವೈಯಕ್ತಿಕ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ, 8ನೇ ತರಗತಿಯ ಪ್ರಖ್ಯಾತ್ 400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ, ಗುಂಡು ಎಸೆತದಲ್ಲಿ ದ್ವೀತಿಯ, ಚಕ್ರ ಎಸೆತದಲ್ಲಿ ತೃತೀಯ, 8ನೇ ತರಗತಿಯ ರಕ್ಷಣ್ 400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ದ್ವೀತಿಯ. 8ನೇ ತರಗತಿಯ ಚನ್ನಗೌಡ 400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ, ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ಮಾನ್ಯ.ಡಿ, ನಿಶಾ. ಬಿ, ಜಾಕ್ಷಿತ, ಮತ್ತು ಜನನಿ. ಜಿ.ಎಸ್ 400 ಮೀಟರ್ ರಿಲೇ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಾರ್ವಜನಿಕ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ. ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ – 2024 ಪ್ರೌಢಶಾಲಾ ವಿಭಾಗದ ಬಾಲಕಿಯರ ವಿಭಾಗದಲ್ಲಿ 10ನೇ ತರಗತಿಯ ಸೌಜನ್ಯ. ಎ ತ್ರಿವಿಧ ಜಿಗಿತದಲ್ಲಿ ದ್ವೀತಿಯ ಸ್ಥಾನ, 9ನೇ ತರಗತಿಯ ಮೋನಿಶಾ. ಆರ್ 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, ಬಾಲಕರ ವಿಭಾಗದಲ್ಲಿ 9ನೇ ತರಗತಿಯ ಹರ್ಷಿತ್ ಈಟಿ ಎಸೆತದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.

ಶಾಲಾ ಪ್ರಾoಶುಪಾಲರಾದ ಶ್ರೀಧರ್ ಶೆಟ್ಟಿ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿ ಶುಭ ಹಾರೈಸಿದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya
error: Content is protected !!