25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ನಿಡ್ಲೆ, ಪೆರ್ಲ, ಕೊಕ್ಕಡ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ ಕಾರ್ಯಕ್ರಮವು ಅ.22 ರಂದು ನೆರವೇರಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಯಾಗಿ ಸೋಮಶೇಖರ್ ಮಾತನಾಡಿ ಕ್ರೀಡಾಕೂಟದಿಂದ ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯ ದ್ವಿಗುಣವಾಗುತ್ತದೆ, ಕ್ರೀಡೆಯಿಂದ ಮಗುವಿನ ಶಾರೀರಿಕ ಬೆಳವಣಿಗೆಯಾಗುತ್ತದೆ ಈ ಕ್ರೀಡಾಕೂಟಕ್ಕೆ ಊರಿನ ಕ್ರೀಡಾಭಿಮಾನಿಗಳ ಪ್ರೋತ್ಸಾಹವನ್ನು ಮೆಚ್ಚಿ ಅಭಿನಂದಿಸಿದರು.

ವೇದಿಕೆಯಲ್ಲಿ ಸ್ಥಳೀಯರಾದ ಜೈನ್, ನಿವೃತ್ತ ಮುಖ್ಯ ಶಿಕ್ಷಕ ಜಿ ಶ್ರೀಧರನ್ ನಾಯರ್, ಪುದುವೆಟ್ಟು ಗ್ರಾಮ ಪಂಚಾಯಿತಿನ ನಿಕಟ ಪೂರ್ವ ಅಧ್ಯಕ್ಷ ಯಶವಂತ ಗೌಡ, ವಲಯ ಸಂಘಟಕರಾದ ವಿಲ್ಫ್ರೆಡ್ ಪಿಂಟೊ ,ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್, ಸಾರ್ವಜನಿಕ ಅಷ್ಟಮಿ ಸಮಿತಿಯ ಅಧ್ಯಕ್ಷ ದಿವಾಕರ ಗೌಡ , ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಗುಂಪಕಲ್ಲು, ಆಶಾ ಕಾರ್ಯಕರ್ತೆಯಾದ ಶ್ರೀಮತಿ ಹರಿಣಾಕ್ಷಿ, ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶ್ರೀಮತಿ ಸುಜಾತಾ ರವರು ಸ್ವಾಗತಿಸಿ, ನಿಶಾಂತ್ ಕುಮಾರ್ ರವರು ಧನ್ಯಾವಾದಗೈದ ಕಾರ್ಯಕ್ರಮವನ್ನು ಶ್ರೀಮತಿ ಪುಷ್ಪಲತಾ ರವರು ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ: ಕುಕ್ಕೇಡಿ ನಿಟ್ಟಡೆ ಗ್ರಾಮದ ಕಾರ್ಯಕರ್ತರ ಪೂರ್ವಭಾವಿ ಸಭೆ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya
error: Content is protected !!