24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

ಬೈಂದೂರು: ಸೇವಾಭಾರತಿ ಕನ್ಯಾಡಿಯು ಕಳೆದ 6 ಜಿಲ್ಲೆಗಳ ವ್ಯಾಪ್ತಿಗಳಲ್ಲಿ 700ಕ್ಕೂ ಹೆಚ್ಚು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನವನ್ನು ನೀಡುತ್ತಾ ಬಂದಿದ್ದು. ಇದರಲ್ಲಿ 100 ಕ್ಕೂ ಹೆಚ್ಚು ಮಂದಿ ಒತ್ತಡಗಾಯದಿಂದ ಬಳಲುತ್ತಿದ್ದು ಇದರ ನಿರ್ವಹಣೆಯನ್ನು ಮಾಡುವುದು ಅತಿ ಕಷ್ಟ. ಒತ್ತಡ ಗಾಯಗಳಿರುವಂತ ವ್ಯಕ್ತಿಗಳು ಪುನಶ್ಚೇತನವನ್ನು ಪಡೆದುಕೊಳ್ಳುವುದು ಸಹ ಕಷ್ಟದ ಸಂಗತಿ. ಈ ನಿಟ್ಟಿನಲ್ಲಿ ಬೈಂದೂರಿನ ಪಡುವರಿ ಗ್ರಾಮದಲ್ಲಿರುವ ಹೇನಬೇರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು 6 ವರ್ಷಗಳಿಂದ ವಿದ್ಯಾರ್ಥಿಗಳ ದಾಖಲಾತಿಯ ಕೊರತೆಯಿಂದ ಮುಚ್ಚಿದ್ದು. ಈ ಶಾಲೆಯನ್ನು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಒತ್ತಡಗಾಯ ನಿರ್ವಹಣೆ ಮತ್ತು ಪುನಶ್ಚೇತನ ಕೇಂದ್ರವನ್ನಾಗಿ ಮಾಡುವ ಸಲುವಾಗಿ ಶಿಕ್ಷಣ ಇಲಾಖೆ ಮತ್ತು ಕನ್ಯಾಡಿಯ ಸೇವಾಭಾರತಿ ಸಂಸ್ಥೆಯ ನಡುವೆ ಒಡಂಬಡಿಕೆ ವಿನಿಮಯ ನಡೆಯಿತು. ಸಮೃದ್ಧ ಬೈಂದೂರು ಪರಿಕಲ್ಪನೆಯ ಸೇವಾ ಸೇತು ಯೋಜನೆಯಡಿಯಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಆದ ಈ ಕಾರ್ಯಕ್ರಮದಲ್ಲಿ ಒಡಂಬಡಿಕೆ ಪತ್ರವನ್ನು ಬಿಇಒ ಆಫೀಸ್ ನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ ಮತ್ತು ಸೇವಾಧಾಮ ಸಂಸ್ಥಾಪಕರಾದ ಕೆ ವಿನಾಯಕ ರಾವ್ ಒಡಂಬಡಿಕೆ ಪತ್ರವನ್ನು ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಬೈಂದೂರಿನ ಸಮೃದ್ಧ ಜನ ಸೇವಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಸುರೇಶ್ ಶೆಟ್ಟಿ , ಉದ್ಯಮಿ ಪಾಂಡುರಂಗ ಪಡಿಯಾರ್, ಸಾಮಾಜಿಕ ಕಾರ್ಯಕರ್ತ ದಿನಕರ್, ಕರ್ನಾಟಕ ಪ್ರಾಥಮಿಕ ಶಿಕ್ಷಕ ಸಂಘ ಜಿಲ್ಲಾ ಗೌರವಾಧ್ಯಕ್ಷ ವಿಶ್ವನಾಥ್ ಪೂಜಾರಿ, ಹಾಗೂ ಸೇವಾಭಾರತಿಯ ಹಿರಿಯ ಪ್ರಬಂಧಕರಾದ ಚರಣ್ ಕುಮಾರ್ ಎಂ ಉಪಸ್ಥಿತರಿದ್ದರು.

ಮುಂದಿನ ತಿಂಗಳುಗಳಲ್ಲಿ ಈ ಯೋಜನೆಯು ಕಾರ್ಯಾಚರಿಸಲ್ಪಡುತ್ತದೆ ಮತ್ತು ಸುತ್ತಮುತ್ತಲ ಜಿಲ್ಲೆಯಲ್ಲಿ ಒತ್ತಡ ಗಾಯಗಳಿರುವಂತಹ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಈ ಕೇಂದ್ರ ವರದಾನವಾಗಲಿದೆ ಹಾಗೂ ಅವರ ಜೀವನ ಕ್ರಮ ಸುಗಮವಾಗಲಿದೆ.

Related posts

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya
error: Content is protected !!