ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ನಿಡ್ಲೆ,ಪೆರ್ಲ, ಕೊಕ್ಕಡ ವಲಯ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿತ್ತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ರತ್ನವರ್ಮ ಜೈನರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಇಂತಹ ಕ್ರೀಡಾಕೂಟದ ಆಯೋಜನೆಯಿಂದ ಶಾಲೆಯ ಸರ್ವತೋಮುಖ ಅಭಿವೃದ್ಧಿ ಆಗಲಿ ಸಾಧ್ಯ ಎಂದು ಅಭಿಪ್ರಾಯಪಟ್ಟು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ಬೆಳಗ್ಗಿನ ಕ್ರೀಡಾ ಧ್ವಜಾರೋಹಣ ಕಾರ್ಯಕ್ರಮವನ್ನು ಸ್ಥಳೀಯ ಪ್ರಗತಿಪರ ಕೃಷಿಕ ಚಿತರಂಜನ್ ಜೈನ್ ನೆರವೇರಿಸಿದರು. ವೇದಿಕೆಯಲ್ಲಿ ನಿಡ್ಲೇ ವಲಯದ ಸಿ. ಆರ್. ಪಿ ಯವರಾದ ಶ್ರೀಮತಿ ಪ್ರತಿಮಾ ,ನಿವೃತ್ತ ಮುಖ್ಯ ಶಿಕ್ಷಕರಾದ ಜಿ ಶ್ರೀಧರನ್ ನಾಯರ್, ಪುದುವೆಟ್ಟು ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಅನಿತಾ, ಬೊಳ್ಮನಾರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ರಂಗನಾಥ ಫಲತ್ತೆರಿ, ವಲಯ ಸಂಘಟಕರದ ವಿಲ್ಫ್ರೈಡ್ ಪಿಂಟೋ, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್,ವನದುರ್ಗ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷರಾದ ನಿತ್ಯಾನಂದ ಗೌಡ,ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪ ಗೌಡ ಅವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಸೀನಪ್ಪ ಗೌಡರವರು ಕ್ರೀಡಾಕೂಟಕ್ಕೆ ಆಗಮಿಸಿದ ಪ್ರಾಸ್ತಾವಿಕ ಮಾತುಗಳ ಮೂಲಕ ಸ್ವಾಗತಿಸಿದರು.
ಕ್ರೀಡಾಕೂಟಕ್ಕೆ ವನದುರ್ಗಪರಮೇಶ್ವರಿ ದೇವಸ್ಥಾನದಿಂದ ಕ್ರೀಡಾ ಜ್ಯೋತಿಯನ್ನು ತಂದು ಕ್ರೀಡಾಂಗಣಕ್ಕೆ ಪ್ರವೇಶಿಸಲಾಯಿತು. ಶಾಲಾ ವಿದ್ಯಾರ್ಥಿ ಕುಮಾರಿ ಹರ್ಷಿತ ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದಳು. ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆ ಯೊಂದಿಗೆ ಆರಂಭಗೊಂಡ ಕ್ರೀಡಾಕೂಟದಲ್ಲಿ ಶಾಲಾ ದೈಹಿಕ ಶಿಕ್ಷಕಿ ಶೀಲಾ ಎನ್ ಧನ್ಯವಾದಗೈದ ಕಾರ್ಯಕ್ರಮವನ್ನು ನಿಶಾಂತ್ ಕುಮಾರ್ ನಿರೂಪಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಊರವರು, ಹಳೆ ವಿದ್ಯಾರ್ಥಿಗಳು, ಪೋಷಕರು, ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಉಪಸ್ಥಿತರಿದ್ದು ಕ್ರೀಡಾಕೂಟಕ್ಕೆ ಸಹಕರಿಸಿದರು.