April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಶ್ರೀ ಕ್ಷೇತ್ರದಲ್ಲಿ ಅ.24ರಂದು ಜರುಗಿತು. ಬೆಳಿಗ್ಗೆ ಊರ, ಪರವೂರ ಗಣ್ಯರು, ಕ್ಷೇತ್ರದ ಮುಖ್ಯಸ್ಥರು, ನೌಕರರು, ಸಂಘ, ಸಂಸ್ಥೆಯವರು, ಧಮ೯ಸ್ಥಳ ಗ್ರಾಮಸ್ಥರು ಕ್ಷೇತ್ರಕ್ಕೆ ಆಗಮಿಸಿ ಹೆಗ್ಗಡೆಯವರಿಗೆ ಗೌರವ ನಮನ ಸಲ್ಲಿಸಿದರು.


ಸಂಜೆ ಮಹೋತ್ಸವ ಸಭಾಭವನದಲ್ಲಿ ಸಮಾರಂಭ ನಡೆಯಿತು. ಶ್ರೀ ಜೈನಮಠ, ಮೂಡಬಿದಿರೆ ಪರಮಪೂಜ್ಯ ಜಗದ್ಗುರು ಡಾ॥ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು ಆಶೀರ್ವಚನ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಲೋಕಸಭಾ ಕ್ಷೇತ್ರ ಬೆಂಗಳೂರು ಗ್ರಾಮಾಂತರ ಸಂಸದರು ಡಾ.ಸಿ.ಎನ್. ಮಂಜುನಾಥ್, ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಪ್ರತಾಪ್‌ ಸಿಂಹ ನಾಯಕ್ ಉಪಸ್ಥಿತರಿದ್ದರು.

ಈ ವೇಳೆ ಅಭಿಮಾನಿಗಳಿಂದ ಡಾ| ಹೆಗ್ಗಡೆಯವರಿಗೆ ಗೌರರ್ವಾಪಣೆಯು ನಡೆಯಿತು.

ಕ್ಷೇತ್ರದ 30 ಹಿರಿಯ ನೌಕರರನ್ನು ಸನ್ಮಾನಿಸಲಾಯಿತು. ಛದ್ಮವೇಷ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಸಮಾರಂಭದಲ್ಲಿ ಮೂಡಬಿದಿರೆ ಶ್ರೀ ಜೈನಮಠ ಪರಮಪೂಜ್ಯ ಜಗದ್ಗುರು ಡಾ|| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು, ಸಂಸದರು ಡಾ.ಸಿ.ಎನ್. ಮಂಜುನಾಥ್, ವಿಧಾನಪರಿಷತ್ ಸದಸ್ಯ ಪ್ರತಾಪ್‌ ಸಿಂಹ ನಾಯಕ್, ಗೌರವಿಸಲಾಯಿತು. ವೇದಿಕೆಯಲ್ಲಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ.ಹಷೇ೯ಂದ್ರ ಕುಮಾರ್ ಉಪಸ್ಥಿತರಿದ್ದರು.


ಧರ್ಮಸ್ಥಳ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಜಿರೆ ಎಸ್.ಡಿ.ಎಂ.ಇ. ಸೊಸೈಟಿ ಕಾರ್ಯದರ್ಶಿ ಡಾ.ಎಸ್. ಸತೀಶ್ಚಂದ್ರ ಸ್ವಾಗತಿಸಿದರು, ಅನ್ನಪೂರ್ಣ ಛತ್ರ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು,, ಪಟ್ಟಾಭಿಷೇಕ ವರ್ಧಂತ್ಯುತ್ಸವದ ಸಂಚಾಲಕರು ಲಕ್ಷ್ಮೀನಾರಾಯಣ ರಾವ್,, ವಂದಿಸಿದರು.

Related posts

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya
error: Content is protected !!